ಮೇ ಎರಡನೇ ವಾರದಲ್ಲಿ 2nd PUC ಮತ್ತು ಜೂನ್ ಮೊದಲ ವಾರದಲ್ಲಿ SSLC ಪರೀಕ್ಷೆ :ಸುರೇಶ್ ಕುಮಾರ್
Team Udayavani, Jan 6, 2021, 7:13 PM IST
ಬೆಂಗಳೂರು : ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಒಂದರಿಂದ ಒಂಬತ್ತನೇ ತರಗತಿಗೆ ಪಠ್ಯ ಕಡಿತವಿಲ್ಲ:
ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್
ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ
ಕೋವಿಡ್ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್