ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರಿಗಾಗಿ 3 ಎಕರೆ ಜಾಗ: ಸಿಎಂ ಭರವಸೆ
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನಿಯೋಗಕ್ಕೆ ಸಿಎಂ ಭರವಸೆ
Team Udayavani, Feb 19, 2022, 3:15 PM IST
ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಈ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಕಟ್ಟಡ, ಆ ಭಾಗದಿಂದ ಬರುವ ವಿದ್ಯಾರ್ಥಿಗಳು, ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲು ವಸತಿ ನಿಲಯ ನಿರ್ಮಾಣ ಮಾಡಲು ಶೀಘ್ರವೇ ಜಮೀನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಇದರೊಂದಿಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವಂತೆ ನಿಯೋಗ ಮಾಡಿದ ಮನವಿಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದರು.
ಮುಖ್ಯಮಂತ್ರಿಗಳ ಭೇಟಿಯ ನಿಯೋಗದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ, ಪದಾಧಿಕಾರಿಗಳಾದ ಬಸವರಾಜ ಬೇಳೂರು, ಶ್ರೀಧರ ಕಲ್ಲೂರು, ಗಂಗಾಧರ ವಾಲಿ, ಅಯ್ಯನಗೌಡ ಬಿರಾದಾರ, ಸಂತೋಷ ಬಸೆಟ್ಟಿ, ಭಿಮಣ್ಣ ನಲತ್ವಾಡ, ಪತ್ರಕರ್ತ ಶಂಕರ ಪಾಗೋಜಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ