ಎಸೆಸೆಲ್ಸಿ : ಶೇ. 30ರಷ್ಟು ಪಠ್ಯ ಕಡಿತ : ಮಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ
Team Udayavani, Feb 28, 2021, 7:10 AM IST
ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗೆ ಶೇ. 70ರಷ್ಟು ಪಠ್ಯಕ್ರಮ ಮಾತ್ರ ಇರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಎಸೆಸೆಲ್ಸಿ ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗಳು, ಹೆತ್ತವರು ಆತಂಕಪಡುವ ಅಗತ್ಯವಿಲ್ಲ. ಅಗತ್ಯವಾದ, ಮುಂದಿನ ಶಿಕ್ಷಣಕ್ಕೆ ನಿರ್ಣಾಯಕವಾದ ಪಠ್ಯ ವಿಷಯಗಳನ್ನು ಪರೀಕ್ಷೆಗೆ ಇರಿಸಿರುವ ಶೇ. 70 ಭಾಗದಲ್ಲಿ ಸೇರಿಸಲಾಗಿದೆ. ಈ ವಿಚಾರವಾಗಿ ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು, ಪೋಷಕರ ಜತೆ ಈಗಾಗಲೇ ಚರ್ಚಿಸಿದ್ದೇನೆ ಎಂದರು.
ಶುಲ್ಕ ಕಡಿತ: ಶೀಘ್ರ ಪರಿಹಾರ ಸೂತ್ರ
ಕೊರೊನಾದಿಂದಾಗಿ ಈ ವರ್ಷ ಅನೇಕ ಹೆತ್ತವರು ಶುಲ್ಕ ಪಾವತಿಸುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಈ ಸಮಸ್ಯೆಗೆ ಹೆತ್ತವರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಯವರು ಪರಸ್ಪರ ಸಮಾಲೋಚನೆ ನಡೆಸಿ ಒಂದು ತೀರ್ಮಾನಕ್ಕೆ ಬರಬೇಕಿತ್ತು. ಇದು ನಡೆಯದ ಕಾರಣ ಸರಕಾರ ಶುಲ್ಕ ಕಡಿತದ ತೀರ್ಮಾನ ತೆಗೆದುಕೊಳ್ಳಬೇಕಾಯಿತು. ಶೇ. 30 ಶುಲ್ಕ ಕಡಿತಗೊಳಿಸಿರುವ ಸರಕಾರದ ನಿರ್ಧಾರದ ವಿರುದ್ಧ ಖಾಸಗಿ ಶಾಲೆಯವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಶುಲ್ಕ ರಿಯಾಯಿತಿ ಸಂಬಂಧಿಸಿದ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರ ಸೂತ್ರವೊಂದನ್ನು ಕಂಡು ಹಿಡಿಯುತ್ತೇವೆ. ಈಗಾಗಲೇ ಆಗಿರುವ ಪೂರ್ಣ ಶುಲ್ಕ ಪಾವತಿಯನ್ನು ಮುಂದಿನ ವರ್ಷದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು. ಕೇರಳದಿಂದ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧದ ಬಗ್ಗೆ ಪ್ರತಿಕ್ರಿಯಿಸಿ, ಇಲ್ಲಿನ ಪರಿಸ್ಥಿತಿ ಬಗ್ಗೆ ಸ್ಥಳೀಯ ಅಧಿ ಕಾರಿ ಗಳ ಜತೆ ಮಾತ ನಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು
ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ
ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್
MUST WATCH
ಹೊಸ ಸೇರ್ಪಡೆ
ಸಿಎಂ ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯದಲ್ಲಿ ಅಧ್ಯಾಪಕರ ಕೊಡುಗೆ ಅಪಾರ: ಎಸ್. ಪಿ. ಶೆಣೈ
ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್
“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್ನ ಧ್ಯೇಯ’