2017ರಿಂದ ಪ್ರತಿವರ್ಷ ಜಮ್ಮು-ಕಾಶ್ಮೀರದಲ್ಲಿ 30ರಿಂದ 40 ನಾಗರಿಕರ ಹತ್ಯೆ: ಸರ್ಕಾರ
ನಾಗರಿಕರ ರಕ್ಷಣೆ ಮತ್ತು ಭದ್ರತೆಗೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ
Team Udayavani, Dec 15, 2021, 4:31 PM IST
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಪ್ರತಿವರ್ಷ (2017ರಿಂದ 2021) 37ರಿಂದ 40 ಮಂದಿ ಹತ್ಯೆಗೊಳಗಾಗುತ್ತಿದ್ದಾರೆ ಎಂದು ಬುಧವಾರ (ಡಿಸೆಂಬರ್ 15) ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ
ಪ್ರತಿ ವರ್ಷ 30-40 ಮಂದಿ ನಾಗರಿಕರು ಹತ್ಯೆಗೊಳಗಾಗುತ್ತಿದ್ದು, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರ ಹಾಗೂ ಹೊರಗಿನ ನಾಗರಿಕರ ರಕ್ಷಣೆ ಮತ್ತು ಭದ್ರತೆಗೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ತಿಳಿಸಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಲವು ನಾಗರಿಕರ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ನಡುವೆಯೂ ಕಾಶ್ಮೀರ ಕಣಿವೆಯಲ್ಲಿ ಭಾರೀ ಸಂಖ್ಯೆಯಲ್ಲಿ ವಲಸಿಗ ಕಾರ್ಮಿಕರು ಉಳಿದುಕೊಂಡಿದ್ದು, ಚಳಿಗಾಲದ ನಂತರ ಮರಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಜಮ್ಮು-ಕಾಶ್ಮೀರಕ್ಕೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನಾಗರಿಕರ ಸುರಕ್ಷತೆಗಾಗಿ ಭದ್ರತಾ ವ್ಯವಸ್ಥೆ ಮತ್ತು ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲಾಗಿದೆ. ಪ್ರತಿ ಪ್ರದೇಶಗಳಲ್ಲಿ ಪಹರೆ, ನಾಕಾಬಂದಿ ಹಾಗೂ ಉಗ್ರರ ವಿರುದ್ಧದ ನಿರಂತರ ಕಾರ್ಯಾಚರಣೆಯಂತಹ ಕ್ರಮ ತೆಗೆದುಕೊಳ್ಳಲಾಗಿದೆ.