ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,164 ಕೋವಿಡ್ ಪ್ರಕರಣ ಪತ್ತೆ, ಶೇ.22.7ರಷ್ಟು ಏರಿಕೆ
ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.63ಕ್ಕೆ ಏರಿಕೆಯಾಗಿದೆ
Team Udayavani, Aug 26, 2021, 10:29 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,164 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಬುಧವಾರಕ್ಕಿಂತ ಶೇ.22ರಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಳವಾದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಆಗಸ್ಟ್ 26) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮೈಸೂರು: ವಿದ್ಯಾರ್ಥಿನಿಯ ಅತ್ಯಾಚಾರ ಮಾಡಿ 3 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಕಿರಾತಕರು!
ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 607 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4.36ಲಕ್ಷಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.25 ಕೋಟಿಗೆ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.
ಕೇರಳದಲ್ಲಿ ಕಳೆದ 24ಗಂಟೆಗಳಲ್ಲಿ ಶೇ.30ರಷ್ಟು ಕೋವಿಡ್ ಪ್ರಕರಣ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ 31,445 ಕೋವಿಡ್ ಪ್ರಕರಣ ವರದಿಯಾಗಿದೆ. 24 ಗಂಟೆಯಲ್ಲಿ ಕೇರಳದಲ್ಲಿ 215 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.
ಕಳೆದ 24ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 5031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 216 ಮಂದಿ ಸಾವನ್ನಪ್ಪಿದ್ದರು. ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.63ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್