ರಾಜ್ಯದಲ್ಲಿ ಔಷಧ ಕೊರತೆಯಾಗದಂತೆ ಕಟ್ಟೆಚ್ಚರ : 5 ಲಕ್ಷ ರೆಮಿಡಿಸಿವರ್‌ ಆಮದು : ಡಿಸಿಎಂ

Team Udayavani, May 13, 2021, 8:34 PM IST

5 ಲಕ್ಷ ರೆಮಿಡಿಸಿವರ್‌ ಆಮದು;‌ ಔಷಧ ಕೊರತೆಯಾಗದಂತೆ ಕಟ್ಟೆಚ್ಚರ : ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ 5 ಲಕ್ಷ ರೆಮಿಡಿಸಿವಿರ್‌ ಇಂಜೆಕ್ಷನ್ ಆಮದು ಮಾಡಿಕೊಳ್ಳುತ್ತಿದ್ದು, ಈ ಸಲುವಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಎರಡನೇ ಅಲೆಯನ್ನು ಎದುರಿಸಲು ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ ಎಲ್ಲಿಯೂ ರೆಮಿಡಿಸಿವರ್‌ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಜತೆಗೆ, ಅಗತ್ಯವಾದ ಎಲ್ಲ ಔಷಧಿಗಳು, ಸಾಮಗ್ರಿಗಳು ಮತ್ತು ವೈದ್ಯಕೀಯ ಬಳಕೆಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ” ಎಂದರು.

15,000 ಆಮ್ಲಜನಕ ಸಾಂದ್ರಕಗಳ (oxygen concentrators) ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ ಈಗಾಗಲೇ 3,000 ಆಮ್ಲಜನಕ ಸಾಂದ್ರಕಗಳ ಖರೀದಿಗೆ ಆದೇಶ ನೀಡಲಾಗಿದ್ದು, ಉಳಿದ 12,000 ಸಾಂದ್ರಕಗಳ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಇದನ್ನೂ ಓದಿ :ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ, ತಿಮ್ಮನಾಯಕನಹಳ್ಳಿಯಲ್ಲಿ ಭಾರಿ ಮಳೆ :ಜನಜೀವನ ಅಸ್ತವ್ಯಸ್ತ

ರಾಜ್ಯದಲ್ಲಿ ಈಗ ಕೋವಿಡ್‌ ಬೆಡ್‌ಗಳನ್ನು 4,000 ದಿಂದ 24,000ಕ್ಕೆ ಹೆಚ್ಚಿಸಲಾಗಿದೆ.  ಒಟ್ಟು 60,000 ಆಕ್ಸಿಜನ್‌ ಬೆಡ್‌ಗಳಿವೆ. ಆಕ್ಸಿಜನ್‌ ಅಗತ್ಯ ಇಲ್ಲದವರು ಕೂಡ ಆಸ್ಪತ್ರೆ ಸೇರಿದ್ದರಿಂದ ಬೆಡ್‌ಗಳ ಕೊರತೆ ಉಂಟಾಗಿತ್ತು. ಇದನ್ನು ತಡೆಯಲು ದಾಖಲಾತಿಗೆ ಮುನ್ನ ಭೌತಿಕ ಪರೀಕ್ಷೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಪ್ರಾಮುಖ್ಯತೆ ನೀಡಲಾಗಿದೆ. ಪ್ರತಿ ಜಿಲ್ಲೆಯ ವೈದ್ಯಕೀಯ ಅಗತ್ಯ ವಸ್ತುಗಳ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಇನ್ನು ಮಾರ್ಚ್ ತಿಂಗಳಲ್ಲಿ ದಿನಕ್ಕೆ 100ರಿಂದ 150 ಮೆ.ಟನ್ ಆಗಿದ್ದ ಆಮ್ಲಜನಕದ ಬೇಡಿಕೆ ಇದ್ದಕ್ಕಿದ್ದಂತೆ ದಿನಕ್ಕೆ 1,200 ಟನ್‌ಗಳಿಗೆ ಏರಿದೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಕೋವಿಡ್‌ ಕರ್ತವ್ಯಕ್ಕೆ ಹಾಜರಾಗುವ ವೈದ್ಯ ವಿದ್ಯಾರ್ಥಿಗಳು & ಇಂಟರ್ನಿಗಳಿಗೆ ಎಲ್ಲ ಸೌಲಭ್ಯ ಕಲ್ಪಸಲಾಗುತ್ತಿದೆ. ಅವರಿಗೆ ಸಂಬಳ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಜತೆಗೆ ಅವರ ಆರೋಗ್ಯ ಮತ್ತು ವಿಶ್ರಾಂತಿಯ ಮೇಲೂ ನಿಗಾ ಇಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.