ಪುಲ್ವಾಮಾ: ಭದ್ರತಾ ಪಡೆಯ ಎನ್ ಕೌಂಟರ್ ಗೆ 5 ಲಷ್ಕರ್ ಉಗ್ರರ ಸಾವು, ಯೋಧ ಹುತಾತ್ಮ
ಗುಂಡಿನ ದಾಳಿ ನಡೆಸಿದ ಪರಿಣಾಮ ಪ್ರತಿದಾಳಿಯಲ್ಲಿ ಐವರು ಲಷ್ಕರ್ ಉಗ್ರರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
Team Udayavani, Jul 2, 2021, 4:32 PM IST
ಶ್ರೀನಗರ್: ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಐವರು ಉಗ್ರರು ಸಾವನ್ನಪ್ಪಿದ್ದು, ಭದ್ರತಾ ಪಡೆಯ ಯೋಧ ಹುತಾತ್ಮರಾಗಿರುವ ಘಟನೆ ಶುಕ್ರವಾರ(ಜುಲೈ 02) ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿನ ಹೆಚ್ಚಳದ ಹಿನ್ನೆಲೆ ಮತ್ತೆ ಲಾಕ್ ಡೌನ್ ಮೊರೆ ಹೋದ ಇಂಡೋನೇಷ್ಯಾ
ರಾಜ್ ಪೋರಾ ಜಿಲ್ಲೆಯ ಹಂಜಿನ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಪ್ರತಿದಾಳಿಯಲ್ಲಿ ಐವರು ಲಷ್ಕರ್ ಉಗ್ರರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಭದ್ರತಾ ಪಡೆಯ ಎನ್ ಕೌಂಟರ್ ಗೆ ಐವರು ಲಷ್ಕರ್ ಉಗ್ರರು ಹತರಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಓರ್ವ ಯೋಧ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿರುವುದಾಗಿ ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?