ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ
Team Udayavani, Oct 25, 2021, 7:37 PM IST
ಹೊಸದಿಲ್ಲಿ : 72 ರೋಹಿಂಗ್ಯಾಗಳು ಬೆಂಗಳೂರು ನಗರದಲ್ಲಿದ್ದು, ಅವರನ್ನು ಗಡಿಪಾರು ಮಾಡುವ ಯಾವುದೇ ತಕ್ಷಣದ ಯೋಜನೆ ಇಲ್ಲ ಎಂದು ಕರ್ನಾಟಕ ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಅಕ್ರಮ ರೋಹಿಂಗ್ಯಾಗಳನ್ನು ಗಡಿಪಾರು ಮಾಡಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು 2017 ರಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ರಾಜ್ಯ ಸರಕಾರದಿಂದ ಈ ಪ್ರತಿಕ್ರಿಯೆ ಬಂದಿದೆ.
“ಬೆಂಗಳೂರು ನಗರ ಪೊಲೀಸರು ರೋಹಿಂಗ್ಯಾಗಳನ್ನು ತನ್ನ ವ್ಯಾಪ್ತಿಯ ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರಗಳಲ್ಲಿ ಇರಿಸಿಲ್ಲ. ಆದರೆ, ಬೆಂಗಳೂರು ನಗರದಲ್ಲಿ ಗುರುತಿಸಿಕೊಂಡಿರುವ 72 ರೋಹಿಂಗ್ಯಾಗಳು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಬೆಂಗಳೂರು ನಗರ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸರಕಾರವು ಲಿಖಿತ ಪ್ರತಿಕ್ರಿಯೆಯಲ್ಲಿ ಹೇಳಿದೆ.
ವಕೀಲ ವಿ.ಎನ್ ರಘುಪತಿ ಮೂಲಕ ಆಕ್ಷೇಪಣೆಯ ಹೇಳಿಕೆಯನ್ನು ಸಲ್ಲಿಸಿದ ಸರಕಾರ ಅವರನ್ನು ಗಡೀಪಾರು ಮಾಡುವ ಯಾವುದೇ ತಕ್ಷಣದ ಯೋಜನೆ ಇಲ್ಲ ಎಂದು ಹೇಳಿದೆ.
ನಗರದ ಈಶಾನ್ಯ ವಿಭಾಗದಲ್ಲಿ ತಂಗಿರುವ ರೋಹಿಂಗ್ಯಾ ನಿರಾಶ್ರಿತರ ಹೆಸರುಗಳನ್ನೂ ರಾಜ್ಯ ಸರಕಾರ ಕೋರ್ಟ್ ಗೆ ನೀಡಿದೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಹೊರತುಪಡಿಸಿ ಈ ಎಲ್ಲಾ ರೋಹಿಂಗ್ಯಾಗಳಿಗೆ ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ವೈಯಕ್ತಿಕ ಸಂಖ್ಯೆಗಳನ್ನು ನೀಡಿದ್ದಾರೆ ಎಂದು ಹೇಳಿದೆ.
ಒಳನುಸುಳುವವರು ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಗಂಭೀರ ಬೆದರಿಕೆ ಒಡ್ಡಿದೆ ಎಂದು ಉಪಾಧ್ಯಾಯ ವಾದಿಸಿದ್ದಾರೆ. ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳು ಸೇರಿದಂತೆ ಎಲ್ಲಾ ಅಕ್ರಮ ವಲಸಿಗರು ಮತ್ತು ನುಸುಳುಕೋರರನ್ನು ಒಂದು ವರ್ಷದೊಳಗೆ ಗುರುತಿಸಿ,ಬಂಧಿಸಿ ಗಡಿಪಾರು ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡುವಂತೆ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಕಾನೂನುಬಾಹಿರ ವಲಸೆ ಮತ್ತು ಒಳನುಸುಳುವಿಕೆ, ಜಾಮೀನು ರಹಿತ ಮತ್ತು ಸಂಯುಕ್ತವಲ್ಲದ ಅಪರಾಧವನ್ನಾಗಿ ಮಾಡಲು ಸಂಬಂಧಿತ ಕಾನೂನುಗಳನ್ನು ತಿದ್ದುಪಡಿ ಮಾಡಲು ನಿರ್ದೇಶನ ನೀಡುವಂತೆ ಅರ್ಜಿದಾರರ ಅಶ್ವಿನಿ ಕುಮಾರ್ ಉಪಾಧ್ಯಾಯ ಉನ್ನತ ನ್ಯಾಯಾಲಯವನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ