ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 81,466 ಕೋವಿಡ್ ಕೇಸ್ ಪತ್ತೆ, 6 ತಿಂಗಳಲ್ಲಿ ಗರಿಷ್ಠ
ಸರ್ಕಾರ ಇನ್ನೂ ಹೆಚ್ಚಿನ ಕಠಿಣ ನಿರ್ಬಂಧ ಜಾರಿಗೊಳಿಸಲು ಮುಂದಾಗಿದೆ.
Team Udayavani, Apr 2, 2021, 10:55 AM IST
ನವದೆಹಲಿ:ಕಳೆದ ಎರಡು ದಿನಗಳಿಂದ ದೇಶದಲ್ಲಿ ಇಳಿಕೆಯಾಗಿದ್ದ ಕೋವಿಡ್ ಸೋಂಕು ಮತ್ತೆ ಹೆಚ್ಚಳಗೊಂಡಿದ್ದು, ಕಳೆದ 24ಗಂಟೆಗಳಲ್ಲಿ 81,466 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ದಿನಂಪ್ರತಿ 469 ಮಂದಿ ಸಾವನ್ನಪ್ಪುತ್ತಿದ್ದು, ಇದು ಕಳೆದ 6 ತಿಂಗಳ ಗರಿಷ್ಠ ಪ್ರಮಾಣವಾಗಿದೆ ಎಂದು ಶುಕ್ರವಾರ( ಏಪ್ರಿಲ್ 02) ಕೇಂದ್ರ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಶದಲ್ಲಿ ತಿಳಿಸಿದೆ.
ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1.23 ಕೋಟಿಗೆ ಏರಿಕೆಯಾಗಿದೆ. ಮಹಾರಾಷ್ಟ್ರ, ಚತ್ತೀಸ್ ಗಢ, ಕರ್ನಾಟಕ, ಪಂಜಾಬ್, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.
ಕಳೆದ 24ಗಂಟೆಗಳಲ್ಲಿ ಶೇ.84.61ರಷ್ಟು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಅಂಕಿ ಅಂಶ ಹೇಳಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ ಹೆಚ್ಚಿನ ಕಠಿಣ ನಿರ್ಬಂಧ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಕೋವಿಡ್ ಆರ್ ಟಿ ಪಿಸಿಆರ್ ಪರೀಕ್ಷೆಯ ದರವನ್ನು ಒಂದು ಸಾವಿರದಿಂದ 500 ರೂಪಾಯಿಗೆ ಇಳಿಕೆ ಮಾಡಿದೆ. ಆ್ಯಂಟಿಜೆನ್ ಪರೀಕ್ಷೆಯ ದರವನ್ನು ಕೂಡಾ ಮಹಾರಾಷ್ಟ್ರ ಸರ್ಕಾರ ಇಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ