11 ಡೋಸ್ ಕೋವಿಡ್ ಲಸಿಕೆ ತೆಗೆದುಕೊಂಡ ಬಿಹಾರದ 84 ವರ್ಷದ ವೃದ್ಧ!

ನಾನು ಲಸಿಕೆಗಳಿಂದ ಸಾಕಷ್ಟು ಪ್ರಯೋಜನ ಪಡೆದಿದ್ದೇನೆ...!!

Team Udayavani, Jan 6, 2022, 1:06 PM IST

covid

ಪಾಟ್ನಾ : ಬಿಹಾರದ 84 ವರ್ಷದ ವೃದ್ಧನೊಬ್ಬ ಕೋವಿಡ್ ಲಸಿಕೆಯ 12 ನೇ ಶಾಟ್ ತೆಗೆದುಕೊಳ್ಳುವ ಮೊದಲು ಸಿಕ್ಕಿಬಿದ್ದಿದ್ದಾನೆ..!.ಹೌದು, ನೀವು ಅಚ್ಚರಿಯಾಗಬೇಡಿ! ಮಾಧೇಪುರ ಜಿಲ್ಲೆಯ ಉದಕಿಶುಂಗಂಜ್ ಉಪವಿಭಾಗದ ವ್ಯಾಪ್ತಿಯಲ್ಲಿರುವ ಪುರೈನಿ ಪೊಲೀಸ್ ಠಾಣೆಯ ಓರೈ ಗ್ರಾಮದ ನಿವಾಸಿ ಬ್ರಹ್ಮದೇವ್ ಮಂಡಲ್, ನಾನು ಈಗಾಗಲೇ 11 ಡೋಸ್ ಲಸಿಕೆ ತೆಗೆದುಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಮಂಡಲ್, ನಿವೃತ್ತ ಅಂಚೆ ಕೆಲಸಗಾರರಾಗಿದ್ದು, ಅವರು ಲಸಿಕೆ ತೆಗೆದುಕೊಂಡ ದಿನಾಂಕ ಮತ್ತು ಸ್ಥಳದ ನಿಖರವಾದ ಟಿಪ್ಪಣಿಯನ್ನು ಸಹ ಇಟ್ಟುಕೊಂಡಿದ್ದು. ಅವರ ಹೇಳಿಕೆಗಳ ಪ್ರಕಾರ, ಮಂಡಲ್ ತನ್ನ ಮೊದಲ ಲಸಿಕೆಯನ್ನು ಫೆಬ್ರವರಿ 13, 2020 ರಂದು ತೆಗೆದುಕೊಂಡಿದ್ದು, ನಂತರ, ಅವರು ಹಲವಾರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಸೆಂಬರ್ 30 ರವರೆಗೆ ನಿಯಮಿತವಾಗಿ 11 ಬಾರಿ ಲಸಿಕೆಗಳನ್ನು ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇಷ್ಟೊಂದು ಡೋಸ್‌ಗಳನ್ನು ಯಾಕೆ ತೆಗೆದುಕೊಂಡಿರಿ ಎಂದು ಕೇಳಿದಾಗ, ಮಂಡಲ್ ಅವರು “ಪ್ರಯೋಜನಕಾರಿ ಪರಿಣಾಮಗಳಿಗಾಗಿ” ಅವುಗಳನ್ನು ತೆಗೆದುಕೊಂಡಿದ್ದೇನೆ ಎಂದು ಉತ್ತರಿಸಿದ್ದಾರೆ. “ನಾನು ಲಸಿಕೆಗಳಿಂದ ಸಾಕಷ್ಟು ಪ್ರಯೋಜನ ಪಡೆದಿದ್ದೇನೆ. ಅದಕ್ಕಾಗಿಯೇ ನಾನು ಅದನ್ನು ಪದೇ ಪದೇ ತೆಗೆದುಕೊಳ್ಳುತ್ತಿದ್ದೇನೆ, ”ಎಂದು ಇಂಡಿಯಾ ಟುಡೇ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ.

ದೇಶದಲ್ಲಿ ಅನೇಕರು ತಮ್ಮ ಎರಡನೇ ಡೋಸ್ ಪಡೆಯಲು ಇನ್ನೂ ಬಾಕಿಯಿರುವಾಗ, ಮಂಡಲ್ 11 ಡೋಸ್‌ಗಳನ್ನು ಪಡೆದಿರುವುದು ಅನೇಕರ ಹುಬ್ಬುಗಳು ಮೇಲಕ್ಕೇರುವಂತೆ ಮಾಡಿದೆ ಮಾತ್ರವಲ್ಲದೆ ಲಸಿಕೆ ವಿತರಣೆಯ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದೆ.

ಒಬ್ಬ ವ್ಯಕ್ತಿಯು ವ್ಯವಸ್ಥೆಯನ್ನು ಹೇಗೆ ದುರುಪಯೋಗ ಮಾಡಬಹುದು ಎಂಬುದನ್ನು ಕಂಡುಹಿಡಿಯಲು ಆಡಳಿತವು ಹರಸಾಹಸ ಮಾಡಿದೆ. ಮಂಡಲ್ ಅವರು ತಮ್ಮ ಆಧಾರ್ ಕಾರ್ಡ್ ಮತ್ತು ಅವರ ಫೋನ್ ಸಂಖ್ಯೆಯನ್ನು ಎಂಟು ಸಂದರ್ಭಗಳಲ್ಲಿ ಸಲ್ಲಿಸಿದ್ದರು ಮತ್ತು ಇತರ ಮೂರರಲ್ಲಿ ತಮ್ಮ ಮತದಾರರ ಗುರುತಿನ ಚೀಟಿ ಮತ್ತು ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಬಳಸಿದ್ದರು.

ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು ಎಂದು ಮಾಧೇಪುರ ಜಿಲ್ಲೆಯ ಸಿವಿಲ್ ಸರ್ಜನ್ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.