
ಉಂಗುರ ನುಂಗಿದ ಮಗು ಸಾವು
Team Udayavani, Mar 24, 2023, 6:27 AM IST

ಮಡಿಕೇರಿ: ಉಂಗುರ ನುಂಗಿದ 8 ತಿಂಗಳ ಗಂಡು ಮಗುವೊಂದು ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ನಿವಾಸಿ ಮುನೀರ್ ಅವರ ಮಗು ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತತ್‌ಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಶಸ್ತ್ರ ಚಿಕಿತ್ಸೆಯ ಮೂಲಕ ಉಂಗುರವನ್ನು ಹೊರ ತೆಗೆಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮಗು ಮೃತಪಟ್ಟಿತು.
ಟಾಪ್ ನ್ಯೂಸ್
