ನೀರು ಕೊಟ್ಟ ಶಾಸಕನಿಗೆ ಹಾಲು ಕುಡಿಸಿದ ರೈತ!

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ- ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲಗೆ ಕ್ಷೀರ ತಂದುಕೊಟ್ಟ ರೈತ ವೃಷಭನಾಥ

Team Udayavani, Mar 15, 2023, 3:42 PM IST

mb-patil

ವಿಜಯಪುರ: ನೀರಾವರಿ ಸೇರಿದಂತೆ ಇತರೆ ಯೋಜನೆ, ಸೌಲಭ್ಯ ನೀಡಿದ ಜನಪ್ರತಿನಿಧಿಗಳಿಗೆ ವೈವಿಧ್ಯಮಯ ವಸ್ತುಗಳ ಹಾರ, ತುರಾಯಿ ಹಾಕುವುದು ಸಾಮಾನ್ಯವಾಗಿದೆ. ಆದರೆ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಯುವರೈತರೊಬ್ಬರು ತಮ್ಮ ಜಮೀನಿಗೆ ನೀರು ಹರಿಸಿದ ಶಾಸಕನಿಗೆ ತಾನೇ ಸಾಕಿದ ಆಕಳ ಹಾಲು ಕುಡಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿ ಗಮನ ಸೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದ ಯುವ ರೈತ ವೃಷಭನಾಥ ಯಶವಂತ ಘೋಸರವಾಡ ಬುಧವಾರ ಬೆಳಿಗ್ಗೆ ನಗರದಲ್ಲಿರುವ ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ ಅವರ ಮನೆಗೆ ಬಂದಿದ್ದರು. ಬರುವಾಗ ವಾಹನದಲ್ಲಿ ಹಾಲು ತುಂಬಿ 3-4 ಕ್ಯಾನ್ ಗಳನ್ನೂ ತಂದಿದ್ದರು.

ಯುವ ರೈತ ಕ್ಯಾನ್ ಸಹಿತ ಬಂದುದನ್ನು ಗಮನಿಸಿದ ಶಾಸಕ ಎಂ.ಬಿ.ಪಾಟೀಲ ಅವರ ಗೃಹ ಕಛೇರಿ ಸಿಬ್ಬಂದಿ ಪ್ರಶ್ನಿಸಿದಾಗ, ಯುವರೈತ ವೃಷಭನಾಥ ಕ್ಷೇತ್ರದ ರೈತರಿಗೆ ನೀರಾವರಿ ಮಾಡಿದ ಮಾಜಿ ಸಚಿವರೂ ಆಗಿರುವ ಶಾಸಕ ಎಂ.ಬಿ. ಪಾಟೀಲ ಅವರಿಗೆ ಕುಡಿಸಲು ಹಾಲು ತಂದಿದ್ದಾಗಿ ಹೇಳಿದ್ದನ್ನು ಕೇಳಿ, ಅಚ್ಚರಿಯೊಂದಿಗೆ ವಿಷಯವನ್ನು ಶಾಸಕರ ಗಮನಕ್ಕೆ ತಂದಿದ್ದಾರೆ.

ಕೂಡಲೇ ಹೊರ ಬಂದ ಶಾಸಕ ಎಂ.ಬಿ.ಪಾಟೀಲ, ತಮಗಾಗಿ ಕಾದಿರುವ ರೈತ ವೃಷಭನಾಥನ ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿದಾಗ, ಯುವರೈತ ಎಂ.ಬಿ.ಪಾಟೀಲ ಅವರ ಕಾಲಿಗೆ ಬಿದ್ದು, ನಮಸ್ಕರಿಸಿ, ನಿಮಗೆ ಕುಡಿಸಲು ನಾನು ಸಾಕಿದ ಆಕಳ ಹಾಲು ತಂದಿದ್ದೇನೆ. ದಯವಿಟ್ಟು ಸೇವಿಸಬೇಕೆಂದು ಮನವಿ ಮಾಡುತ್ತಾನೆ.

ಅಲ್ಲದೇ ಕುಡಿಯುವ ನೀರಿಗೂ ತತ್ವಾರ ಇದ್ದ ನಮ್ಮ ಭಾಗಕ್ಕೆ ನಿಮ್ಮ ರಾಜಕೀಯ ರಹಿತ ಅಭಿವೃದ್ಧಿ ಬದ್ಧತೆಯಿಂದ ನೀರಾವರಿ ಸೌಲಭ್ಯ ಸಿಕ್ಕಿದೆ. ಹೀಗಾಗಿ ವಿದ್ಯಾವಂತನಾದ ನಾನು ನೌಕರಿ ಮಾಡುವ ನಿರ್ಧಾರದಿಂದ ಹಿಂದೆ ಸರಿದು, ನನ್ನ ತಮ್ಮ ಭೀಮು ಜೊತೆ ಸೇರಿ ಇರುವ ಮೂರು ಎಕರೆ ಜಮೀನಿನಲ್ಲಿ ಅರ್ಧ ಎಕರೆ ಮೇವೂ ಬೆಳೆದುಕೊಂಡು ಹೈನುಗಾರಿಕೆ ಮಾಡುತ್ತಿದ್ದೇನೆ. ಸಮಗ್ರ ಕೃಷಿಯಲ್ಲಿ ತೊಡಗಿದ್ದೇನೆ‌. ದ್ರಾಕ್ಷಿ ತೋಟ ಮಾಡಿದ್ದೇನೆ, ನಾಲ್ಕಾರು ಆಕಳು ಸಾಕಿಕೊಂಡು ನಿತ್ಯವೂ ನೂರು ಲೀಟರ್ ಹಾಲು ಮಾರಾಟ ಮಾಡಿ, ಲಕ್ಷಾಂತರ ರೂ. ಆದಾಯ ಗಳಿಸುತ್ತಿದ್ದೇನೆ. ದ್ರಾಕ್ಷಿ ಹಣ್ಣಿನಿಂದ 12 ಲಕ್ಷ ರೂ. ಆದಾಯ ಬರುತ್ತಿದೆ ಎಂದು ವಿವರಿಸಿದ.

ನನ್ನ ಈ ಸ್ವಾವಲಂಬಿ ಹಾಗೂ ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಲು ನೀವು ನೀಡಿದ ನೀರಿನ‌ ಕೊಡುಗೆಯ ಕೃಪೆ ಎಂದು ಹೇಳುತ್ತಲೇ, ತಾನು ತಂದಿದ್ದ ಹಾಲನ್ನು ಕುಡಿಯಲು ನೀಡಿ ಸಂತೃಪ್ತಿ ವ್ಯಕ್ತಪಡಿಸಿ, ಭಾವುಕನಾದ.

ತಮ್ಮ ರಾಜಕೀಯ ಇಚ್ಚಾಶಕ್ತಿಯ ನೀರಾವರಿ ಸೌಲಭ್ಯದಿಂದ ಜಿಲ್ಲೆಯ ಯುವಕರು ಕೃಷಿಯತ್ತ ಮುಖಮಾಡಿ, ಸ್ವಾವಲಂಬಿ ಜೀವನದ ಜೊತೆಗೆ ಸಮಗ್ರ ಕೃಷಿಯಲ್ಲಿ ಸಾಧನೆ ಮಾಡುತ್ತಿರುವುದು ಸಂತೃಪ್ಪಿ ತಂದಿದೆ ಎಂದರು.

ಸಿದ್ಧಾಪುರದ ಯುವರೈತ ಸಹೋದರರು ಹೈನುಗಾರಿಕೆ ಮೂಲಕ‌ ಸ್ವಯಂ ಉದ್ಯೋಗ ಮಾಡುತ್ತಿರುವುದು ಮಾದರಿ ಎನಿಸಿದೆ. ವಿಜಯಪುರ ಜಿಲ್ಲೆಯಲ್ಲಿ ಜಲಕ್ರಾಂತಿಯಾಗಿದ್ದು, ಭವಿಷ್ಯದಲ್ಲಿ ಕ್ಷೀರಕ್ರಾಂತಿ ಮಾಡುವುದಾಗಿ ಹೇಳಿದರು.

ರೈತರ ಸಹಕಾರದೊಂದಿಗೆ ಸಾಮೂಹಿಕ ಒಡೆತನದಲ್ಲಿ ಡೈರಿ‌ ಆರಂಭಿಸುವ ಯೋಜನೆ ರೂಪಿಸುತ್ತಿದ್ದೇನೆ. ಅಲ್ಲದೇ ಅರ್ಥಿಕ ದುರ್ಬಲ ರೈತರಿಗೆ ಸಾಲ ಸೌಲಭ್ಯ ಮತ್ತು ಸಬ್ಸಿಡಿ‌ ಯೋಜನೆ ಮೂಲಕ ಗುಡಿ ಕೈಗಾರಿಕೆಗೆ ಪ್ರೋತ್ಸಾಹ ನೀಡಲಾಗುವುದಾಗಿ ಭರವಸೆ ನೀಡಿದರು.

ಯುವಕರು, ಮಹಿಳೆಯರು ಸ್ವಯಂ‌ ಉದ್ಯೋಗ ಕೈಗೊಂಡು ಸ್ಚಾವಲಂಬಿ ಬದುಕಿಗೆ ಅಗತ್ಯ ಕಾರ್ಯಕ್ರಮಗಳ ಜೊತೆಗೆ, ರೈತರ ಉತ್ಪನ್ನಗಳಿಗೆ ಉತ್ತಮ ಆದಾಯ ಒದಗಿಸಲು ಆಹಾರ ಸಂಸ್ಕರಣೆ ಘಟಕ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.