ಬೆಂಗಳೂರಿನಲ್ಲಿ ಲಾರಿ ಪಲ್ಟಿ ; ಅಡಿಗೆ ಸಿಲುಕಿ ಹಿರಿಯ ಪತ್ರಕರ್ತ ದುರ್ಮರಣ
Team Udayavani, Jan 23, 2022, 6:54 PM IST
ಬೆಂಗಳೂರು: ಟೌನ್ ಹಾಲ್ ಎದುರು ಲಾರಿಯೊಂದು ಬೈಕ್ ಮೇಲೆ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಕನ್ನಡ ಪತ್ರಿಕೆಯ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ.
ಬೈಕ್ ನಲ್ಲಿ ಚಾಮರಾಜಪೇಟೆಯಲ್ಲಿರುವ ಪತ್ರಿಕೆಯ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು.
ತತ್ ಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ನೀಡಲು ಆರಂಭಿಸಿದರೂ ಫಲ ಕಾಣದೆ ಕೊನೆಯುಸಿರೆಳೆದಿದ್ದಾರೆ. ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಎಂ ಸವರಾಜ ಬೊಮ್ಮಾಯಿ ಸಂತಾಪ
ಗಂಗಾಧರ ಮೂರ್ತಿ ಅವರ ನಿಧಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಮಧ್ಯಾಹ್ನ ಕಚೇರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಇದು ನಿಜಕ್ಕೂ ಆಘಾತಕಾರಿ ಘಟನೆ. ದೇವರು ಗಂಗಾಧರ ಮೂರ್ತಿ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ವನ್ನು ತಡೆಯುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.
ಗಂಗಾಧರ ಮೂರ್ತಿ ಒಬ್ಬ ಸೃಜನಶೀಲ ಪತ್ರಕರ್ತರಾಗಿದ್ದರು. ತಮ್ಮ ಕರ್ತವ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸುತ್ತಿದ್ದರು. ಅವರ ಸಾವು ನನಗೆ ಆಘಾತವುಂಟು ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?
ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಡೆಂಗ್ಯೂ ಪ್ರಕರಣ ಭಾರೀ ಏರಿಕೆ : ಇಂದು ರಾಷ್ಟ್ರೀಯ ಡೆಂಗ್ಯೂ ದಿನ
ಆನ್ಲೈನ್ನಲ್ಲಿ ಆ್ಯಸಿಡ್ ಖರೀದಿಸಿದ್ದ ನಾಗೇಶ : ತನಿಖೆ ವೇಳೆ ವಿಚಾರ ಬಹಿರಂಗ