ಎಸಿಬಿ ದಾಳಿ: ಹೆಸ್ಕಾಂನ ಗ್ರೂಪ್ ಸಿ ನೌಕರನ ಮನೆಯಲ್ಲಿ ಡಾಲರ್, ಪ್ಲಾಟಿನಂ!
Team Udayavani, Nov 24, 2021, 11:58 AM IST
ಬೆಳಗಾವಿ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 68 ಕಡೆಗಳಲ್ಲಿ ಭ್ರಷ್ಟ ಅಧಿಕಾರುಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದು, ಬೆಳಗಾವಿಯಲ್ಲಿ ಹೆಸ್ಕಾಂನ ಗ್ರೂಪ್ ಸಿ ನೌಕರ ನಾತಾಜಿ ಪಾಟೀಲ್ ಮನೆಯ ಮೇಲೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಪ್ಲಾಟಿನಂ ಮತ್ತು ಚಿನ್ನಾಭರಣ, ಡಾಲರ್ ನೋಟುಗಳ ಜೊತೆ ಹೆಸ್ಕಾಂನ ಕೆಲ ಕಡತಗಳು, ಜಮೀನು ಪತ್ರಗಳನ್ನೂ ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ವೈಭವ ನಗರದಲ್ಲಿರುವ ತನ್ನ 3 ಅಂತಸ್ತಿನ ಮನೆಗೆ ಲಿಫ್ಟ್ ಅಳವಡಿಸಿದ್ದು ಎಸಿಬಿ ಅಧಿಕಾರಿಗಳು ಜಾಲಾಟ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಅಧಿಕಾರಿಯೊಬ್ಬನ ಮನೆಯಲ್ಲಿ 7 ಕೆಜಿ ಚಿನ್ನ!!: 68 ಕಡೆ ಏಕ ಕಾಲದಲ್ಲಿ ಎಸಿಬಿ ದಾಳಿ
ನಾತಾಜಿ ಪಾಟೀಲ್ ಅವರ ಪುತ್ರ ವಿದೇಶದಲ್ಲಿ ಉದ್ಯೋಗಿಯಾಗಿದ್ದಾನೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.
ಬೆಳಗಾವಿ ಜಿಲ್ಲೆಯ ಇನ್ನೂ ಮೂವರು ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಆರ್ಟಿಒ ಇನ್ಸ್ಪೆಕ್ಟರ್ ಸದಾಶಿವ ಮರಲಿಂಗಣ್ಣನವರ್ ಅವರ ಗೋಕಾಕ್ ನಗರದಲ್ಲಿರುವ ಮನೆ ಸೇರಿ ಒಟ್ಟು 6 ಕಡೆ ದಾಳಿ ನಡೆಸಲಾಗಿದ್ದು, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ ಅವರ ಬೈಲಹೊಂಗಲದ ನಿವಾಸ ಸೇರಿ 3 ಕಡೆ ಏಕ ಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…