GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ
Team Udayavani, Jan 19, 2021, 5:04 PM IST
ಶಿವಮೊಗ್ಗ: ಜಿಎಸ್ ಟಿ ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ.
ವೇಣು (36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ನೋಂದಣಿ ಮಾಡಲು ವೇಣು ಲಂಚ ಕೇಳಿದ್ದು, ಇಂದು 2500 ರೂ. ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ, ಇನ್ಸ್ ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ್, ರಘನಾಯ್ಕ್, ನಾಗರಾಜ್, ಸುರೇಂದ್ರ, ಹರೀಶ್, ಯೋಗೇಶ್, ಶ್ರೀನಿವಾಸ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ಬೈಪಾಸ್ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಟೋಲ್‌ಗೇಟ್‌ಗೆ ಮುತ್ತಿಗೆ, ಪೊಲೀಸರ ಜತೆ ಚಕಮಕಿ