ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕ್ರಮ : ಆರೋಗ್ಯ ಸಿಬಂದಿಗೆ 50 ದಿನ ರಜೆ ಇಲ್ಲ
Team Udayavani, Mar 19, 2021, 7:00 AM IST
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ 50 ದಿನಗಳ ವರೆಗೆ ವೈದ್ಯ ಸಿಬಂದಿ, ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಹೇಳಿದರು.
ನನ್ನ ಸಹಿತ ಆರೋಗ್ಯ ಇಲಾಖೆ ಅಧಿಕಾರಿಗಳು, ಕೊರೊನಾ ನಿಯಂತ್ರಣ ಕೆಲಸದಲ್ಲಿರುವ ಎಲ್ಲ ವೈದ್ಯರು, ಸಿಬಂದಿಗೆ ರಜೆ ಇಲ್ಲ. ಶ್ರಮಪಟ್ಟು ಕೆಲಸ ಮಾಡಿ ನಮ್ಮ ರಾಜ್ಯವನ್ನು ಕೊರೊನಾ ಮುಕ್ತ ರಾಜ್ಯವಾಗಿ ಮಾಡೋಣ ಎಂದು ಕೋವಿಡ್ ನಿಯಂತ್ರಣ ಸಂಬಂಧ ಗುರುವಾರ ಆಸ್ಪತ್ರೆಗಳ ಮುಖ್ಯಸ್ಥ ರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.
ಬೆಂಗಳೂರಿನಲ್ಲಿ 200 ಆ್ಯಂಬುಲೆನ್ಸ್ ನಿಯೋಜಿಸಲಾಗಿದೆ. ಎಲ್ಲ ಮಾಹಿತಿ ತತ್‌ಕ್ಷಣ ದೊರೆಯಲು ರಿಯಲ್ ಟೈಮ್ ವ್ಯವಸ್ಥೆ ಮಾಡಲಾಗುತ್ತಿದೆ. ಗೃಹ ವೈದ್ಯರು, ಅರೆವೈದ್ಯಕೀಯ ಸಿಬಂದಿಯ ನೇಮಕವನ್ನು ತಾತ್ಕಾಲಿಕವಾಗಿ ಮಾಡಲು ತೀರ್ಮಾ ನಿಸಲಾಗಿದೆ. ಇದೇ ವಾರದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು. ಎರಡನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ಸಹಾಯ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡು ಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಒಟ್ಟು 1,000 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿದ್ದು, ಸೋಮವಾರ ದಿಂದ ಕಾರ್ಯ ನಿರ್ವ ಹಿಸಲಿದೆ. ಕೋವಿಡ್ ಲಸಿಕೆ ವ್ಯರ್ಥ ವಾಗುವುದಕ್ಕೆ ಸಂಬಂಧಿಸಿ ಸರಿಯಾದ ಮಾಹಿತಿ ನೀಡಲು, ಪ್ರತೀ ದಿನ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಮೊದಲ ಬಾರಿ ಕೊರೊನಾ ಬಂದಾಗ ಸರಿಯಾದ ಮಾಹಿತಿ, ಜ್ಞಾನ ಇರಲಿಲ್ಲ. ಅದನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ. ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ನಮ್ಮ ಬಳಿ ಲಸಿಕೆಯೂ ಇದೆ. ಹಾಗಾಗಿ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಮತ್ತು ತಪ್ಪದೆ ಸುರಕ್ಷಾ ಕ್ರಮ ಪಾಲಿಸಬೇಕು ಎಂದರು.
ಲಸಿಕೆ ಮುಖ್ಯ
ಎರಡನೇ ಅಲೆ ಭೀತಿ ಸಂದರ್ಭದಲ್ಲಿ ಲಸಿಕೆ ಮುಖ್ಯ. ಕೆಲವು ದಿನಗಳಿಂದ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಪ್ರತೀ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟ ರೋಗಿಗಳಿಗೆ ಲಸಿಕೆ ಹಾಕಿಸಬೇಕು. ಈ ಮೂಲಕ 2ನೇ ಅಲೆ ತಡೆಯಬೇಕು ಎಂದು ಸಚಿವ ಸುಧಾಕರ್‌ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ