Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
Team Udayavani, Mar 28, 2024, 3:48 PM IST
ಹೈದರಾಬಾದ್: ಖ್ಯಾತ ನಟ ಸಿದ್ಧಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ಗೌಪ್ಯವಾಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ನಿನ್ನೆಯಿಂದೆ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಈ ಬಗ್ಗೆ ಜೋಡಿ ಸ್ಪಷ್ಟನೆ ನೀಡಿದೆ.
ತಾವಿಬ್ಬರು ಮದುವೆಯಾಗಿಲ್ಲ, ಎಂಗೇಜ್ ಮೆಂಟ್ ಆಗಿದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಇಬ್ಬರು ಫೋಟೋ ಹಂಚಿಕೊಂಡಿದ್ದಾರೆ. ಎಂಗೇಜ್ ಮೆಂಟ್ ರಿಂಗ್ ಹಾಕಿರುವ ಫೋಟೋ ಕೆಳಗೆ ಅವರು ‘He said yes’, ‘She said yes’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಅಧಿಕೃತವಾಗಿ ತಮ್ಮ ಸಂಬಂಧವನ್ನು ಘೋಷಿಸಿದ್ದಾರೆ.
ಬುಧವಾರ (ಮಾ.27) ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರಂನಲ್ಲಿರುವ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ ಎಂದು ʼಗ್ರೇಟ್ ಆಂಧ್ರʼ ವರದಿ ಆಗಿತ್ತು.
ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ 2021 ರಲ್ಲಿ ಬಂದ ‘ಮಹಾ ಸಮುದ್ರಂʼ ಸಿನಿಮಾದಲ್ಲಿ ಜೊತೆಯಾಗಿ ಸಿನಿಮಾ ಮಾಡಿದ್ದರು. ಆ ಬಳಿಕ ಅವರಿಬ್ಬರು ಆತ್ಮೀಯವಾಗಿ ನಾನಾ ಕಡೆ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಹಂಚಿಕೊಳ್ಳುತ್ತಿದ್ದರು. ಇಬ್ಬರು ಡೇಟ್ ಮಾಡುತ್ತಿದ್ದರೂ, ಅದನ್ನು ಎಲ್ಲೂ ಕೂಡ ಬಹಿರಂಗವಾಗಿ ಹೇಳಿರಲಿಲ್ಲ.
ಇಬ್ಬರ ಎಂಗೇಜ್ ಮೆಂಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರಿಗೆ ನೂರಾರು ಮಂದಿ ಶುಭಕೋರಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್