
ತಂದೆಯನ್ನು ನೆನೆದು ಭಾವುಕರಾದ ನಟ ಡಾ.ರಮೇಶ್ ಅರವಿಂದ್
ರಾಣಿ ಚನ್ನಮ್ಮ ವಿವಿ 10ನೇ ಘಟಿಕೋತ್ಸವ
Team Udayavani, Sep 14, 2022, 4:08 PM IST

ಬೆಳಗಾವಿ : ”ನನ್ನ ಈ ಸಂಭ್ರಮದ ಕ್ಷಣದಲ್ಲಿ ತಂದೆ ಇರಬೇಕಿತ್ತು” ಎಂದು ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರು ಬುಧವಾರ ರಾಣಿ ಚನ್ನಮ್ಮ ವಿವಿಯಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿ ಭಾವುಕರಾದರು.
ಗೌರವ ಡಾಕ್ಟರೇಟ್ ಪದವಿ ಪ್ರಧಾನ ಸಮಾರಂಭ ಬಳಿಕ ರಮೇಶ್ ಪ್ರತಿಕ್ರಿಯೆ ನೀಡಿ, ನನಗೆ ಗೌರವ ಡಾಕ್ಟರೇಟ್ ಸಿಗುತ್ತಿದ್ದಂತೆ ಸಂಬಂಧಿಕರಿಗೆ ವಾಟ್ಸಪ್ ಸಂದೇಶ ಕಳುಹಿಸಿದೆ. ಅಭಿನಂದನೆಗಳನ್ನು ಹೇಳಿ, ”ತಂದೆ ಇರಬೇಕಿತ್ತು” ಎಂದು ಆ ಕಡೆಯಿಂದ ಪ್ರತಿಕ್ರಿಯೆ ಬಂತು ಎಂದು ತಂದೆಯನ್ನು ನೆನೆದು ಭಾವುಕರಾದರು.
ಟಿಕೆಟ್ ತೆಗೆದುಕೊಂಡು ಚಿತ್ರ ನೋಡಿದ ಪ್ರತಿ ಪ್ರೇಕ್ಷಕನಿಗೆ ನಾನು ಋಣಿ ಆಗಿರುವೆ. ನನ್ನ ಜತೆಗೆ ನಟಿಸಿರುವ ಹಲವು ನಾಯಕ-ನಟಿಯರನ್ನು ನಾನು ಸ್ಮರಿಸುವೆ. ಎಲ್ಲರ ಸಹಕಾರವೇ ನನ್ನ ಈ ಸಾಧನೆಗೆ ಕಾರಣ ಎಂದರು.
30 ವರ್ಷ ಚಿತ್ರರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಟ ರಮೇಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
10ನೇ ಘಟಿಕೋತ್ಸವ
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗಾಗಿ ಬೀದರ್‌ನ ಬಸವ ತತ್ವ ಪ್ರಚಾರಕಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಿ. ರವಿಚಂದರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಯಿತು.
ಸುವರ್ಣ ವಿಧಾನಸೌಧದಲ್ಲಿ ನಡೆದ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಿದ್ದರು. . ಆಂಧ್ರಪ್ರದೇಶದ ವಿಜಯನಗರಂನ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ವಿ. ಕಟ್ಟಿಮನಿ ಘಟಿಕೋತ್ಸವ ಭಾಷಣ ಮಾಡಿದರು.
ಘಟಿಕೋತ್ಸವದಲ್ಲಿ 43,607 ವಿದ್ಯಾರ್ಥಿಗಳು ಪದವಿ ಪಡೆದುಕೊಂಡರು. ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 11 ಚಿನ್ನದ ಪದಕ ನೀಡಲಾಯಿತು.. 48 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
