ನಟ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು
Team Udayavani, Feb 16, 2021, 10:04 PM IST
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾದ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ,
ಮಂಗಳವಾರ ಬೆಳಕು ಚಿತ್ರದ ಚಿತ್ರೀಕರಣದ ವೇಳೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು ಕೂಡಲೇ ಅವರನ್ನು ನಗರದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಸ್ಪತ್ರೆಯ ವೈದ್ಯಾಧಿಕಾರಿಗಳು ತಪಾಸಣೆ ನಡೆಸಿ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಸೋಮವಾರವಷ್ಟೇ ಬೆಳಕು ಚಿತ್ರದ ಚಿತ್ರೀಕರಣ ಆರಂಭವಾಗಿದ್ದು ಅದರಲ್ಲಿ ತೊಡಗಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು ಹಾಗಾಗಿ ಮಂಗಳವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.