ಸೇನೆಗೆ ಮತ್ತಷ್ಟು ಬಲ: ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಲಿವೆ ಮತ್ತೆ 3 ರಫೇಲ್ ಯುದ್ಧ ವಿಮಾನ
Team Udayavani, Nov 3, 2020, 10:28 PM IST
ನವದೆಹಲಿ: ಲಡಾಖ್ ಗಡಿಯಲ್ಲಿ ಚೀನಾದ ಜತೆಗೆ ಬಿಕ್ಕಟ್ಟು ಮುಂದುವರಿದಿರುವಂತೆಯೇ ಭಾರತೀಯ ವಾಯುಪಡೆಗೆ ಮತ್ತಷ್ಟು ಬಲ ನೀಡುವಂತೆ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳು ಬುಧವಾರ ಸಂಜೆ ಭಾರತಕ್ಕೆ ಬಂದಿಳಿಯಲಿದೆ. ಬುಧವಾರ ಬೆಳಗ್ಗೆ ಫ್ರಾನ್ಸ್ನಿಂದ ಟೇಕ್ ಆಫ್ ಆಗುವ ವಿಮಾನಗಳು ಸಂಜೆ ತಲುಪಲಿವೆ ಎಂದು ಮೂಲಗಳು ತಿಳಿಸಿವೆ.
ಮೊದಲ ಬ್ಯಾಚ್ನಲ್ಲಿ 5 ರಫೇಲ್ ಯುದ್ಧ ವಿಮಾನಗಳು ಜುಲೈ 28ರಂದು ಹರ್ಯಾಣದ ಅಂಬಾಲಾ ವಾಯುನೆಲೆ ತಲುಪಿದ್ದು, ಸೆ.10ರಂದು ಅದನ್ನು ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಾಗಿತ್ತು. ಈಗ ಹೊಸದಾಗಿ 3 ವಿಮಾನಗಳು ಬರುವ ಕಾರಣ, ವಾಯುಪಡೆಗೆ 8 ರಫೇಲ್ ಫೈಟರ್ ಜೆಟ್ಗಳ ಬಲ ಬಂದಂತಾಗಲಿದೆ.
ಇದನ್ನೂ ಓದಿ:ಕಾವೂರು: ಚೂರಿಯಿಂದ ಇರಿದು ಮಲ್ಲಿ ಲೇಔಟ್ ನಿವಾಸಿಯ ಬರ್ಬರ ಹತ್ಯೆ!
ಒಟ್ಟು 36 ರಫೇಲ್ ವಿಮಾನಗಳು 2022ರ ಮಧ್ಯದಲ್ಲಿ ಭಾರತವನ್ನು ತಲುಪಲಿದೆ. 2016ರಲ್ಲಿ ಎನ್ಡಿಎ ಸರ್ಕಾರ 60 ಸಾವಿರ ಕೋಟಿ ರೂ. ಮೊತ್ತದ ಈ ಒಪ್ಪಂದಕ್ಕೆ ಸಹಿ ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ