
ಸುಪಾರಿ ನೀಡಿದವರು ಯಾರು? ಕಾನೂನು ಕ್ರಮ ಜರುಗಿಸೋಣ: ಪ್ರಧಾನಿಗೆ ಸಿಬಲ್ ಒತ್ತಾಯ
Team Udayavani, Apr 2, 2023, 2:54 PM IST

ನವದೆಹಲಿ: ”ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಕೆಲವರು ಸುಪಾರಿ ನೀಡಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಒಂದು ದಿನದ ನಂತರ, ಭಾನುವಾರ ರಾಜ್ಯಸಭಾ ಸಂಸದ, ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ”ಸುಪಾರಿ ನೀಡಿದವರು ಯಾರು, ನಾವು ಅವರನ್ನು ವಿಚಾರಣೆಗೆ ಒಳಪಡಿಸೋಣ” ಎಂದು ಹೇಳಿದ್ದಾರೆ.
ಭೋಪಾಲ್‌ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕೆಲವರು ದೇಶದಲ್ಲಿ ಮತ್ತು ದೇಶದ ಹೊರಗೆ ಕುಳಿತು. ತಮ್ಮ ಪ್ರತಿಷ್ಠೆಯನ್ನು ಹಾಳುಮಾಡಲು ಕೆಲವು ಜನರೊಂದಿಗೆ ಶಾಮೀಲಾಗಿ ಸುಪಾರಿ ನೀಡಿದ್ದಾರೆ ಎಂದು ಹೇಳಿದ್ದರು.
“ಮೋದಿ ಜಿಯವರ ಆರೋಪದಂತೆ.. ಅವರ ಸಮಾಧಿಯನ್ನು ಅಗೆಯಲು.. ಜನರು… ಕೆಲವರು ದೇಶದೊಳಗೆ ಮತ್ತು ದೇಶದ ಹೊರಗೆ.. ದಯವಿಟ್ಟು ಇವರುಗಳ ಹೆಸರುಗಳನ್ನು ನಮಗೆ ತಿಳಿಸಿ, ವ್ಯಕ್ತಿಗಳೋ, ಸಂಸ್ಥೆಗಳು ಅಥವಾ ದೇಶಗಳೋ.ಇದು ದೇಶದ ರಹಸ್ಯವಾಗಿರಲು ಸಾಧ್ಯವಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸೋಣ” ಎಂದು ಸಿಬಲ್ ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
