ಸೋನಿಯಾ ಗಾಂಧಿ, ರಾಹುಲ್ ವಿಚಾರಣೆ ಬಳಿಕ ನ್ಯಾಷನಲ್ ಹೆರಾಲ್ಡ್ ಕಚೇರಿ ಮೇಲೆ ಇ.ಡಿ ದಾಳಿ
ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ವಿವಿಧ ಭಾಗಗಳಲ್ಲಿ ದಾಳಿ ಮುಂದುವರಿದಿದೆ
Team Udayavani, Aug 2, 2022, 12:56 PM IST
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ ನಂತರ ಮಂಗಳವಾರ (ಆಗಸ್ಟ್ 02) ನ್ಯಾಷನಲ್ ಹೆರಾಲ್ಡ್ ಕಚೇರಿಯ ಆವರಣದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅರಂತೋಡು: ಧಾರಾಕಾರ ಮಳೆ ತಗ್ಗು ಪ್ರದೇಶಗಳ ಮನೆ, ಅಂಗಡಿ ಮುಂಗಟ್ಟುಗಳು ಜಲಾವೃತ
ನ್ಯಾಷನಲ್ ಹೆರಾಲ್ಡ್ ಹೌಸ್ ನ 4ನೇ ಮಹಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಲ್ಲಿಯೇ ನ್ಯಾಷನಲ್ ಹೆರಾಲ್ಡ್ ಪತ್ರಿಕಾಲಯದ ಕಚೇರಿ ಇದ್ದಿರುವುದಾಗಿ ವರದಿ ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ವಿವಿಧ ಭಾಗಗಳಲ್ಲಿ ದಾಳಿ ಮುಂದುವರಿದಿದೆ ಎಂದು ಇ.ಡಿ. ಮೂಲಗಳು ತಿಳಿಸಿವೆ. ಕಾಂಗ್ರೆಸ್ ಒಡೆತನದ ನ್ಯಾಶನಲ್ ಹೆರಾಲ್ಡ್ ಪತ್ರಿಕಾಲಯ ಸೇರಿದಂತೆ 12 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್ ಹಣ ದುರುಪಯೋಗ ಪ್ರಕರಣದಲ್ಲಿ ಈ ಮೊದಲು ಕಾಂಗ್ರೆಸ್ ಮುಖಂಡರಾದ ಪವನ್ ಬನ್ಸಾಲ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು