ರಾಜಸ್ಥಾನ್ ಬಳಿಕ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ತೆಲಂಗಾಣ
ಆಂಧ್ರಪ್ರದೇಶ, ಹರ್ಯಾಣ , ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
Team Udayavani, May 20, 2021, 2:08 PM IST
ಜೈಪುರ್: ಮ್ಯೂಕೋರ್ ಮೈಕೋಸಿಸ್( ಬ್ಲ್ಯಾಕ್ ಫಂಗಸ್) ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಆರಂಭಿಕವಾಗಿ ಸಮಸ್ಯೆಯೊಡ್ಡುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಅದನ್ನು ಸಾಂಕ್ರಾಮಿಕ ರೋಗ ಎಂದು ಗುರುವಾರ(ಮೇ 20) ಘೋಷಿಸಿದೆ. ರಾಜಸ್ಥಾನ ಸರ್ಕಾರ ಈಗಾಗಲೇ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.
ಇದನ್ನೂ ಓದಿ:ಹಣಕ್ಕಾಗಿ ಕೋವಿಡ್ ಟೆಸ್ಟ್ ನಕಲಿ ವರದಿ: ಬೆಂಗಳೂರಿನಲ್ಲಿ ವೈದ್ಯರು ಸೇರಿ ಆರು ಜನರು ವಶಕ್ಕೆ
ಸಾಂಕ್ರಾಮಿಕ ಸೋಂಕು ರೋಗ ಕಾಯ್ದೆ 1897ರ ಕಾಯ್ದೆಯಡಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ ಎಂಬುದಾಗಿ ತೆಲಂಗಾಣ ಸರ್ಕಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಸ್ಥಾನದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಸರ್ಕಾರ, ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ರೋಗ ಎಂದು ಬುಧವಾರ ಘೋಷಿಸಿತ್ತು. ರಾಜಸ್ಥಾನ ಸಾಂಕ್ರಾಮಿಕ ರೋಗ ಕಾಯ್ದೆ 2020ರ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.
ಬ್ಲ್ಯಾಕ್ ಫಂಗಸ್ ಕರ್ನಾಟಕ, ಉತ್ತರಾಖಂಡ್, ತೆಲಂಗಾಣ, ಮಧ್ಯಪ್ರದೇಶ, ಆಂಧ್ರಪ್ರದೇಶ, ಹರ್ಯಾಣ , ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ