ಉತ್ತರಪ್ರದೇಶ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಪಾದಯಾತ್ರೆ, ಪೊಲೀಸರಿಂದ ತಡೆ
ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬ್ಯಾರಿಕೇಡ್ ಹಾಕಲಾಗಿತ್ತು.
Team Udayavani, Sep 19, 2022, 3:26 PM IST
ಲಕ್ನೋ: ಉತ್ತರಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸೋಮವಾರ(ಸೆ.19) ಪಾದಯಾತ್ರೆ ಹಮ್ಮಿಕೊಂಡಿದ್ದು, ಅಖಿಲೇಶ್ ಹಾಗೂ ಕಾರ್ಯಕರ್ತರನ್ನು ಪೊಲೀಸರು ಲಕ್ನೋದಲ್ಲಿ ಮಾರ್ಗ ಮಧ್ಯದಲ್ಲಿ ತಡೆದಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ
ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲು ಉತ್ತರಪ್ರದೇಶ ಸರಕಾರ ಭಯಪಡುತ್ತಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ. ಸಂಚಾರ ದಟ್ಟಣೆ ತಪ್ಪಿಸಲು ಸಮಾಜವಾದಿ ಪಕ್ಷದ ಶಾಸಕರಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿತ್ತು. ಆದರೆ ಮಾರ್ಗಸೂಚಿಯನ್ನು ಅನುಸರಿಸಲು ನಿರಾಕರಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಇತರ ಶಾಸಕರು, ಸಂಸದರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ವಿಧಾನಸಭಾದ ಹೊರಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಸಮೀಪ ಧರಣಿ ನಡೆಸಿ ಅಣಕು ಕಲಾಪ ನಡೆಸಿರುವುದಾಗಿ ವರದಿ ತಿಳಿಸಿದೆ.
ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬ್ಯಾರಿಕೇಡ್ ಹಾಕಲಾಗಿತ್ತು. ದಾರಿ ಮಧ್ಯೆದಲ್ಲಿಯೇ ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್