ಮುಸ್ಕಾನ್ ಗೆ ಅಲ್ ಖೈದಾ ಬೆಂಬಲ; ಅನಂತ ಕುಮಾರ್ ಹೆಗಡೆ ಬಳಿ ಚರ್ಚೆ: ಸಿಎಂ
ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ,ದಾಖಲೆ ಕಾಂಗ್ರೆಸ್ ನದ್ದು
Team Udayavani, Apr 11, 2022, 12:15 PM IST
ಬೆಂಗಳೂರು: ಬೆಲೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.
ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು.ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದರು.
ಉಡುಪಿ ಪ್ರವಾಸ
ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು