ಅಭ್ಯರ್ಥಿಗಳ ಟಿಕೆಟ್‌ ಹಂಚಿಕೆ: ಬ್ಲಾಕ್‌, ಜಿಲ್ಲಾ ಕಾಂಗ್ರೆಸ್‌ ಅಂಗಳಕ್ಕೆ

Team Udayavani, Dec 19, 2022, 6:35 AM IST

ಅಭ್ಯರ್ಥಿಗಳ ಟಿಕೆಟ್‌ ಹಂಚಿಕೆ: ಬ್ಲಾಕ್‌, ಜಿಲ್ಲಾ ಕಾಂಗ್ರೆಸ್‌ ಅಂಗಳಕ್ಕೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಟಿಕೆಟ್‌ ಹಂಚಿಕೆಯ ಎರಡನೇ ಹಂತದ ಪ್ರಹಸನ ಇದೀಗ ಬ್ಲಾಕ್‌ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಂಗಳಕ್ಕೆ ತಲುಪಿದೆ.

ಟಿಕೆಟ್‌ ಆಕಾಂಕ್ಷಿಗಳಾಗಿ ಅರ್ಜಿ ಸಲ್ಲಿಸಿದವರ ಪೈಕಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಆ ಪಟ್ಟಿಯನ್ನು ರಾಜ್ಯ ಚುನಾವಣಾ ಸಮಿತಿಗೆ ಕಳಿಸಿಕೊಡುವ ಅಧಿಕಾರವನ್ನು ಬ್ಲಾಕ್‌ ಕಾಂಗ್ರೆಸ್‌ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ನೀಡಲು ಭಾನುವಾರ ನಡೆದ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದಾಗ 1,350 ಅರ್ಜಿಗಳು ಬಂದಿವೆ. ಆ ಅರ್ಜಿಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಹೆಸರಗಳನ್ನು ಆಯ್ಕೆ ಮಾಡಿ ಬ್ಲಾಕ್‌ ಕಾಂಗ್ರೆಸ್‌ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿಯವರು ಡಿ.31ರೊಳಗೆ ರಾಜ್ಯ ಚುನಾವಣಾ ಸಮಿತಿಗೆ ಕಳಿಸಿಕೊಡಬೇಕು. ಜನವರಿ ಮೊದಲ ವಾರದಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಿ ಆ ಹೆಸರಗಳನ್ನು ಪರಿಶೀಲಿಸಿ ಹೈಕಮಾಂಡ್‌ಗೆ ಶಿಫಾರಸು ಮಾಡಲಿದೆ.

ಅಭ್ಯರ್ಥಿಗಳನ್ನು ಹೈಕಮಾಂಡ್‌ ಅಂತಿಮಗೊಳಿಸಲಿದೆ ಎಂದು ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸದೆ ಇರುವ ಹೆಸರುಗಳನ್ನು ಪರಿಗಣಿಸಲಾಗುತ್ತದೆಯೇ ಎಂದು ಕೇಳಿದ್ದಕ್ಕೆ, ಉತ್ತಮ ಅಭ್ಯರ್ಥಿಗಳಿದ್ದರೆ ಪರಿಶೀಲಿಸಲಾಗುವುದು ಎಂದು ಉತ್ತರಿಸಿದರು.

ಡಿಕೆಶಿ ಖಡಕ್‌ ವಾರ್ನಿಂಗ್‌
ಅಭ್ಯರ್ಥಿಗಳನ್ನು ಘೋಷಿಸುವ ಅಧಿಕಾರ ಯಾರಿಗೂ ಇಲ್ಲ. ಅಭ್ಯರ್ಥಿಗಳ ಹೆಸರನ್ನು ಯಾರೂ ಘೋಷಿಸಬಾರದು. ಪಕ್ಷದ ಮಿತಿ ಎಲ್ಲರಿಗೂ ಅನ್ವಯವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಗಂಗಾವತಿ, ಹುನಗುಂದದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದರು, ಭಾನುವಾರ ಮಾಜಿ ಸಚಿವ ಜಮೀರ್‌ ಅಹ್ಮದ್‌ ಮೈಸೂರಿನಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ್ದರು.

ಟಾಪ್ ನ್ಯೂಸ್

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.