ಆಲೂರು ರೇವ್‌ ಪಾರ್ಟಿಯಲ್ಲಿ ಭಾಗಿ : ಮಹಿಳಾ ಹೆಡ್‌ ಕಾನ್‌ಸ್ಟೆಬಲ್ ಶ್ರೀಲತಾ ಅಮಾನತು

Team Udayavani, Apr 18, 2021, 7:20 AM IST

ಆಲೂರು ರೇವ್‌ ಪಾರ್ಟಿಯಲ್ಲಿ ಭಾಗಿ : ಮಹಿಳಾ ಹೆಡ್‌ ಕಾನ್‌ಸ್ಟೆಬಲ್ ಶ್ರೀಲತಾ ಅಮಾನತು

ಮಂಗಳೂರು : ಹಾಸನ ಜಿಲ್ಲೆಯ ಆಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎ. 10ರಂದು ರಾತ್ರಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬ ಆರೋಪಕ್ಕೆ ಸಿಲುಕಿರುವ ನಗರದ ಇಕನಾಮಿಕ್‌ ಆ್ಯಂಡ್‌ ನಾರ್ಕೊಟಿಕ್‌ ಕ್ರೈಂ ಠಾಣೆಯ ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಅಮಾನತು ಮಾಡಲಾಗಿದೆ.

ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಈ ಮಾಹಿತಿ ನೀಡಿದ್ದಾರೆ. ಪಾರ್ಟಿ ನಡೆದ ಸಂದರ್ಭದಲ್ಲಿ ಶ್ರೀಲತಾ ಸ್ಥಳದಲ್ಲಿದ್ದರು. ಅವರ ಪುತ್ರ ಪಾರ್ಟಿಯಲ್ಲಿ ಭಾಗಿಯಾಗಿದ್ದ ಎಂಬ ಮಾಹಿತಿ ಇದೆ. ಹಾಸನ ಪೊಲೀಸರು ತಪಾಸಣೆಗೆ ಬಂದಾಗ ಶ್ರೀಲತಾ ತಾನು ಮಂಗಳೂರು ಸಿಸಿಬಿ ಎಎಸ್‌ಐ ಎಂದು ಹೇಳಿ ವಾಗ್ವಾದ ನಡೆಸಿದ್ದು, ಹುದ್ದೆ ದುರುಪಯೋಗ ಮಾಡಿಕೊಂಡಿದ್ದಾರೆ. ಅವರಿಗೆ ಪಾರ್ಟಿಯ ಆಯೋಜಕರ ಸಂಪರ್ಕವಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಈಗಾಗಲೇ ಹಾಸನ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಮಹಿಳಾ ಕಾನ್‌ಸ್ಟೆಬಲ್‌ ಶ್ರೀಲತಾ ಮತ್ತು ಅವರ ಪುತ್ರ ಅತುಲ್‌ ರೇವ್‌ ಪಾರ್ಟಿ ನಡೆದ ಎಸ್ಟೇಟ್‌ ಮಾಲಕರ ಜತೆ ನಿರಂತರ ಸಂಪರ್ಕ ಹೊಂದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಅತುಲ್‌ ಪರಾರಿಯಾಗಿದ್ದಾನೆ.

ಭಾಗಿಯಾದವರಲ್ಲಿ ಮಂಗಳೂರಿನವರೇ ಅಧಿಕ
ಕೊರೊನಾ ಮಾರ್ಗಸೂಚಿಗಳಿದ್ದರೂ ಉಲ್ಲಂಘಿಸಿ, ಅನುಮತಿ ಪಡೆಯದೆ ನಡೆದ ಪಾರ್ಟಿಯಲ್ಲಿ ಮಂಗಳೂರು, ಬೆಂಗಳೂರಿನ ಸುಮಾರು 130ಕ್ಕೂ ಅಧಿಕ ಯುವಕ -ಯುವತಿಯರು ಪಾಲ್ಗೊಂಡಿದ್ದರು. ಮದ್ಯ, ಡ್ರಗ್ಸ್‌ ಬಳಕೆ ಮಾಡಲಾಗಿತ್ತು ಎಂಬ ಆರೋಪವಿದೆ. ಹಾಸನ ಎಸ್‌.ಪಿ. ಶ್ರೀನಿವಾಸ್‌ ಗೌಡ ನೇತೃತ್ವದಲ್ಲಿ ಪೊಲೀಸ್‌ ದಾಳಿ ನಡೆದಿದ್ದು, ಇನ್ನೂ ಹಲವರ ಬಂಧನ ಬಾಕಿ ಇದೆ. ನಗರಗಳಲ್ಲಿ ಕೊರೊನಾ ರಾತ್ರಿ ಕರ್ಫ್ಯೂ ಇರುವ ಹಿನ್ನೆಲೆಯಲ್ಲಿ ಮತ್ತು ಪೊಲೀಸರ ಕಣ್ತಪ್ಪಿಸಿ ಮೋಜು ನಡೆಸುವ ಉದ್ದೇಶದಿಂದ ಒಳಪ್ರದೇಶದ ಎಸ್ಟೇಟ್‌ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ. ಶ್ರೀಲತಾ ಈ ರೇವ್‌ಪಾರ್ಟಿ ಆಯೋಜನೆಯಲ್ಲಿ ಆಯೋಜಕರಿಗೆ ಹೇಗೆ ನೆರವಾಗಿದ್ದರು ಎಂಬ ತನಿಖೆ ಇನ್ನಷ್ಟೇ ನಡೆಯಬೇಕಿದೆ.

ಟಾಪ್ ನ್ಯೂಸ್

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.