PM ಮೋದಿ ಸ್ವಾಗತಕ್ಕೆ ಅಮೆರಿಕ ಸಜ್ಜು: ಭಾರತೀಯ ಅಮೆರಿಕನ್ನರಲ್ಲಿ ಇನ್ನಿಲ್ಲದ ಉತ್ಸಾಹ

ವಾಷಿಂಗ್ಟನ್‌ ಡಿಸಿಯತ್ತ ಪ್ರಯಾಣಿಸಲು ಸಾವಿರಾರು ಮಂದಿ ರೆಡಿ

Team Udayavani, Jun 14, 2023, 7:06 AM IST

MODI BAIDEN

ವಾಷಿಂಗ್ಟನ್‌: ಪ್ರಧಾನಿ ನರೇಂದ್ರ ಮೋದಿಯವರ ಐತಿಹಾಸಿಕ ಅಮೆರಿಕ ಭೇಟಿಗೆ ದಿನಗಣನೆ ಆರಂಭವಾಗಿದ್ದು, ಜೂ.21ರಿಂದ 24ರವರೆಗೆ ಅವರು ಅಮೆರಿಕದ ಅಧಿಕೃತ ಆಹ್ವಾನದ ಮೇರೆಗೆ ಅಲ್ಲಿಗೆ ತೆರಳಲಿದ್ದಾರೆ.

ಮೋದಿಯವರ ಭೇಟಿ ಮೂಲಕ ಭಾರತ ಮತ್ತು ಅಮೆರಿಕದ ಬಾಂಧವ್ಯದ ಹೊಸ ಶಕೆ ಆರಂಭವಾಗಲಿದ್ದು, 21ನೇ ಶತಮಾನದ ನಿರ್ಣಾಯಕ ಸಂಬಂಧವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಈ ಭೇಟಿ ಬಗ್ಗೆ ಅಮೆರಿಕದಲ್ಲಿರುವ ಭಾರತೀಯರೆಲ್ಲರೂ ಉತ್ಸುಕರಾಗಿದ್ದು, ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದು ಶ್ವೇತಭವನದ ಅಧಿಕಾರಿಗಳು ಹೇಳಿದ್ದಾರೆ. ಜೂ.22ರಂದು ಮೋದಿಯವರಿಗೆಂದೇ ಅಧ್ಯಕ್ಷ ಜೋ ಬೈಡೆನ್‌ ಮತ್ತು ಪತ್ನಿ ಜಿಲ್‌ ಬೈಡೆನ್‌ ಅವರು ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಅಮೆರಿಕ ಸರ್ಕಾರಿ ಪ್ರಾಯೋಜಿತ ಔತಣಕೂಟಕ್ಕೆ ಆಹ್ವಾನಿಸಲಾಗಿರುವ ಅತಿಥಿಗಳ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ, ಮೂಲಗಳ ಪ್ರಕಾರ, 120ಕ್ಕೂ ಹೆಚ್ಚು ಮಂದಿ ಶ್ವೇತಭವನದ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಹೋಟೆಲ್‌ ಕೊಠಡಿ ದರ ದಿಢೀರ್‌ ಹೆಚ್ಚಳ

ಪ್ರಧಾನಿ ಮೋದಿ ಭೇಟಿ ನಿಮಿತ್ತ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಮೆರಿಕದ ಮೂಲೆ ಮೂಲೆಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಹೀಗಾಗಿ, ವಾಷಿಂಗ್ಟನ್‌ ಡಿಸಿಯಲ್ಲಿ ಹೋಟೆಲ್‌ ರೂಂಗಳು ಮತ್ತು ವಿಮಾನಗಳ ಟಿಕೆಟ್‌ ದರಗಳಲ್ಲಿ ದಿಢೀರ್‌ ಏರಿಕೆ ಕಂಡುಬಂದಿದೆ. ಶ್ವೇತಭವನದಲ್ಲಿ ನಡೆಯುವ ಸ್ವಾಗತ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ಭಾರತೀಯ ಅಮೆರಿಕನ್ನರು ಭಾಗಿಯಾಗಲಿದ್ದಾರೆ.

ಅಮೆರಿಕದಲ್ಲಿ ಪ್ರಧಾನಿ ಕಾರ್ಯಕ್ರಮ

ಜೂ.21- ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ವಾಷಿಂಗ್ಟನ್‌ ಡಿಸಿಗೆ ಪ್ರಧಾನಿ ಮೋದಿ ಆಗಮನ

ಜೂ.22- ಶ್ವೇತಭವನದ ಹುಲ್ಲುಹಾಸಿನಲ್ಲಿ ಮೋದಿಯವರಿಗೆ ಬೈಡೆನ್‌-ಜಿಲ್‌ ದಂಪತಿ ವತಿಯಿಂದ ವಿಶೇಷ ಔತಣಕೂಟ

ಜೂ.23- ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಮತ್ತು ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಅವರು ಆತಿಥ್ಯದಲ್ಲಿ ವಿದೇಶಾಂಗ ಇಲಾಖೆಯ ಫಾಗ್ಗಿ ಬಾಟಮ್‌ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನದ ಭೋಜನ.

ಜೂ.23- ವಾಷಿಂಗ್ಟನ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.