ಆಂಧ್ರಪ್ರದೇಶ; ಭಾರೀ ಮಳೆಗೆ ಕುಸಿದು ಬಿದ್ದ 3 ಅಂತಸ್ತಿನ ಕಟ್ಟಡ, ನಾಲ್ವರು ಸಾವು
ಮೂರು ಅಂತಸ್ತಿನ ಕಟ್ಟಡ ಬೆಳಗ್ಗಿನ ಜಾವ 3ಗಂಟೆ ಸುಮಾರಿಗೆ ಕುಸಿದು ಬಿದ್ದಿತ್ತು.
Team Udayavani, Nov 20, 2021, 1:24 PM IST
ನವದೆಹಲಿ: ಆಂಧ್ರಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು, ಮೂವರು ಮಕ್ಕಳು ಮತ್ತು ಮಹಿಳೆ ಸಾವನ್ನಪ್ಪಿರುವ ಘಟನೆ ಶನಿವಾರ (ನವೆಂಬರ್ 20) ಅನಂತ್ ಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಟ್ವಿಟರ್ ಗುರುತಿಸಿದ 6 ಮಹಿಳೆಯರಲ್ಲಿ ಮೈಸೂರು ಯುವತಿಗೂ ಸ್ಥಾನ
ಕಟ್ಟಡದ ಅವಶೇಷಗಳಡಿ ನಾಲ್ಕಕ್ಕಿಂತಲೂ ಅಧಿಕ ಮಂದಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಅನಂತಪುರ ಜಿಲ್ಲೆಯ ಕಾದ್ರಿ ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡ ಬೆಳಗ್ಗಿನ ಜಾವ 3ಗಂಟೆ ಸುಮಾರಿಗೆ ಕುಸಿದು ಬಿದ್ದಿತ್ತು. ಮೂರು ಅಂತಸ್ತಿನ ಹಳೆಯ ಕಟ್ಟಡದ ಮೇಲೆ ಮತ್ತೆ ಎರಡು ಮಹಡಿಗಳನ್ನು ಕಟ್ಟಲಾಗಿತ್ತು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಸತ್ಯಬಾಬು ಎಎನ್ ಐಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಅಧಿಕಾರಿಗಳು, ರಕ್ಷಣಾ ತಂಡ ಭೇಟಿ ನೀಡಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ
ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!