ಬಾಂಬ್ ಬೆದರಿಕೆ ಕೇಸ್: ಮಾಜಿ ಎನ್ ಕೌಂಟರ್ ಸ್ಪೆಷಲಿಸ್ಟ್ ಶರ್ಮಾ ನಿವಾಸದ ಮೇಲೆ NIA ದಾಳಿ
1983ರಲ್ಲಿ ಪ್ರದೀಪ್ ಶರ್ಮಾ ಮುಂಬಯಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು.
Team Udayavani, Jun 17, 2021, 10:40 AM IST
ಮುಂಬಯಿ: ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸ ಆ್ಯಂಟಿಲಿಯಾ ಸಮೀಪ ಸ್ಫೋಟಕ ತುಂಬಿದ ವಾಹನ ಪತ್ತೆಯಾದ ಪ್ರಕರಣ ಹಾಗೂ ಉದ್ಯಮಿ ಮನ್ ಸುಖ್ ಹಿರಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್ ಐಎ) ಗುರುವಾರ(ಜೂನ್ 17) ಮುಂಬಯಿಯ ಮಾಜಿ ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಅಕ್ರಮ ಗೋಮಾಂಸ ಸಾಗಾಟ ಪ್ರಕರಣ: ಇಬ್ಬರ ಬಂಧನ, 650 ಕೆ.ಜಿ. ಮಾಂಸವಶ
ಮುಂಬಯಿಯ ಅಂಧೇರಿಯಲ್ಲಿರುವ ಪ್ರದೀಪ್ ಶರ್ಮಾ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಎನ್ ಐಎ ತಂಡ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸುತ್ತಿದೆ. ಮೂಲಗಳ ಪ್ರಕಾರ, ಈ ಸಂದರ್ಭದಲ್ಲಿ ಪ್ರದೀಪ್ ಶರ್ಮಾ ಅವರು ನಿವಾಸದಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್ ಐಎ ಅಧಿಕಾರಿಗಳು ಎರಡು ಬಾರಿ ಪ್ರದೀಪ್ ಶರ್ಮಾ ಅವರನ್ನು ವಿಚಾರಣೆಗೊಳಪಡಿಸಿತ್ತು. ಪ್ರದೀಪ್ ಶರ್ಮಾ ಮುಂಬಯಿನ ಮತ್ತೊಬ್ಬ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆಯ ಆಪ್ತ ಎಂದು ಮೂಲಗಳು ತಿಳಿಸಿವೆ.
ಎರಡು ಪ್ರಕರಣಗಳ ಮುಖ್ಯ ರೂವಾರಿ ಎನ್ನಲಾದ ಸಚಿನ್ ವಾಝೆಯನ್ನು ಎನ್ ಐಎ ಬಂಧಿಸಿತ್ತು. 1983ರಲ್ಲಿ ಪ್ರದೀಪ್ ಶರ್ಮಾ ಮುಂಬಯಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಮುಂಬಯಿ ಭೂಗತ ಜಗತ್ತಿನ ಸುಮಾರು 300 ಮಂದಿಯನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡುವ ಮೂಲಕ ಶರ್ಮಾ ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಗುರುತಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ