ಅಪ್ಪು ಅಂತಿಮ ನಮನ : ಕಂಠೀರವ ಸ್ಟೇಡಿಯಂ ಬಳಿ ನೂಕು ನುಗ್ಗಲು
Team Udayavani, Oct 29, 2021, 7:51 PM IST
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾ ರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಿ ಖ್ಯಾತ ನಟನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಕ್ರೀಡಾಂಗಣದ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆ ಗೊಂಡಿದ್ದಾರೆ. ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ನೂರಾರು ಜನರು ಸ್ಟೇಡಿಯಂ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸಾವಿರಾರು ಜನರು ಆಗಮಿಸಿರುವ ಹಿನ್ನಲೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಅಭಿಮಾನಿಗಳು ‘‘ಅಪ್ಪು ಅಮರ’‘ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಆಕ್ರಂದನ ಮುಗಿಲು ಮುಟ್ಟಿದೆ.
ಪೇದೆಯೊಬ್ಬರ ಕಾಲು ಮುರಿತ
ಅಭಿಮಾನಿಗಳನ್ನು ತಡೆಯುವ ವೇಳೆ ಪೊಲೀಸ್ ಪೇದೆಯೊಬ್ಬರ ಕಾಲು ಮುರಿತಕ್ಕೊಳಗಾಗಿದೆ.
ಸದಾಶಿವ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡು ಬಂದಿದೆ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕಲಾಗಿದೆ.
ಇಂದು ರಾತ್ರಿ ಮತ್ತು ನಾಳೆಯವರೆಗೆ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ.
ತಂದೆ ವರನಟ ಡಾ. ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಪುನೀತ್ ಆವರ ಅಂತ್ಯಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಜೂ. 1: ಮೂಡುಬಿದಿರೆಗೆ ಮುಖ್ಯಮಂತ್ರಿ ಬೊಮ್ಮಾಯಿ; ವಿದ್ಯಾರ್ಥಿಗಳ ಜತೆಗೆ ಸಂವಾದ
ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್
ಮುಂಬೈ: “ವಿಧವಾ ಶಾಸ್ತ್ರ’ಕ್ಕೆ 34 ಗ್ರಾಪಂಗಳಿಂದ ಗುಡ್ಬೈ!
ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿ
ರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್ನ 25 ಕಂಪೆನಿ ಜತೆ ಸಿಎಂ ಮಾತುಕತೆ