ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆಗೆ ಡೇಟ್ ಫಿಕ್ಸ್?
Team Udayavani, Mar 25, 2022, 2:50 PM IST
ಮುಂಬಯಿ: ಬಾಲಿವುಡ್ ಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರು ಇದೇ ಏಪ್ರಿಲ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಲಿವುಡ್ ಜೋಡಿಗಳಾದ ವಿಕ್ಕಿ ಕೌಶಲ್-ಕತ್ರಿನಾ ಕೈಫ್, ಫರ್ಹಾನ್ ಅಖ್ತರ್-ಶಿಬಾನಿ ದಾಂಡೇಕರ್ ಅವರ ವಿವಾಹದ ನಂತರ ಬಾಲಿವುಡ್ ಎದುರು ನೋಡುತ್ತಿರುವ ದೊಡ್ಡ ಮದುವೆ ಇದಾಗಿದೆ.
29 ರ ಹರೆಯದ ಆಲಿಯಾ ಮತ್ತು 39 ರ ಹರೆಯದ ರಣಬೀರ್ ತಮ್ಮ ಸಂಬಂಧದ ಬಗ್ಗೆ ಹೇಳಿಕೊಂಡಿದ್ದರೂ ಮದುವೆಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತಾರೆ. ಚಿತ್ರ ಪ್ರೇಮಿಗಳು ಮತ್ತು ಸುದ್ದಿಗಾರರು ಅವರ ಮದುವೆಯ ಸುದ್ದಿ ಕೇಳಲು ಕಾತುರರಾಗಿದ್ದಾರೆ.
ರಣಬೀರ್ ಅವರ ತಾಯಿ ನೀತು ಕಪೂರ್ ಅವರು ಸೆಲೆಬ್ರಿಟಿ ಡಿಸೈನರ್ ಮನೀಶ್ ಮಲ್ಹೋತ್ರಾ ಅವರ ಮಳಿಗೆಯಲ್ಲಿ ಕಾಣಿಸಿಕೊಂಡಿರುವುದು ಆ ಬಳಿಕ ಮನೀಶ್ ಅವರ ಮನೆಗೆ ತೆರಳಿರುವುದು ಮದುವೆಗೆ ಸಿದ್ಧತೆ ನಡೆಯುತ್ತಿರುವ ಸೂಚನೆ ಎಂದು ಊಹಿಸಲಾಗಿದೆ
ತಾರಾ ಜೋಡಿ ಮದುವೆ ಗಾಗಿ ಚಲನಚಿತ್ರಗಳ ಚಿತ್ರೀಕರಣದಿಂದ ದಿನಾಂಕಗಳ ಬಿಡುವನ್ನು ಕೇಳಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಆಲಿಯಾ ಮತ್ತು ರಣಬೀರ್ ಇತ್ತೀಚೆಗೆ ವಾರಣಾಸಿಯಲ್ಲಿ ”ಬ್ರಹ್ಮಾಸ್ತ್ರ” ಚಿತ್ರದ ಕೊನೆಯ ದೃಶ್ಯಗಳನ್ನು ಚಿತ್ರೀಕರಿಸಿ ಮುಂಬೈಗೆ ಮರಳಿದ್ದಾರೆ. ಅವರು ಒಟ್ಟಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅಯನ್ ಮುಖರ್ಜಿ ನಿರ್ದೇಶನದ ಚಿತ್ರ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ