ಮುಂದುವರಿದ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾ ಅಧಿಕಾರಿ, ಯೋಧ ಹುತಾತ್ಮ
ಏತನ್ಮಧ್ಯೆ ಉಗ್ರರು ಮತ್ತು ಸೇನೆ ಮುಖಾಮುಖಿಯಾದಾಗ ಎನ್ ಕೌಂಟರ್ ನಡೆದಿರುವುದಾಗಿ ವರದಿ ವಿವರಿಸಿದೆ.
Team Udayavani, Oct 15, 2021, 9:21 AM IST
ಶ್ರೀನಗರ್: ನಾಲ್ಕು ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ ಐವರು ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ(ಅಕ್ಟೋಬರ್ 14) ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಯಾರಿಗೆ ಒಲಿಯುತ್ತೆ IPL ಟ್ರೋಫಿ : ಇಂದು ಮದಗಜಗಳ ಕಾದಾಟ
ಉಗ್ರರ ವಿರುದ್ಧದ ಕೂಂಬಿಂಗ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್, ರಾಜೌರಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ವರದಿ ಹೇಳಿದೆ. ಅಕ್ಟೋಬರ್ 10ರಂದು ರಾತ್ರಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆದಿದ್ದು, ಅದೇ ಉಗ್ರರ ಗುಂಪು ಮತ್ತೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಅಕ್ಟೋಬರ್ 10ರಂದು ನಡೆದ ದಾಳಿಯಲ್ಲಿ ಸೇನಾ ಅಧಿಕಾರಿ ಹಾಗೂ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಪೂಂಚ್ ಜಿಲ್ಲೆಉ ಮೆಂಧಾರ್ ಸಬ್ ಡಿವಿಷನ್ ನ ನಾರ್ ಖಾಸ್ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸೇನೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಉಗ್ರರ ಗುಂಪನ್ನು ಯೋಧರು ಕಳೆದ ನಾಲ್ಕು ದಿನಗಳಿಂದ ಬೆನ್ನಟ್ಟಿದ್ದರೂ ಕೂಡಾ ಬೃಹತ್ ಬೆಟ್ಟ ಮತ್ತು ಅರಣ್ಯ ಪ್ರದೇಶಗಳಿಂದ ಆವೃತ್ತವಾಗಿದ್ದು, ಇದರಿಂದಾಗಿ ಉಗ್ರರನ್ನು ಪತ್ತೆ ಹಚ್ಚುವುದಕ್ಕೆ ತೊಂದರೆಯಾಗುತ್ತಿರುವುದಾಗಿ ವರದಿ ಹೇಳಿದೆ. ಏತನ್ಮಧ್ಯೆ ಉಗ್ರರು ಮತ್ತು ಸೇನೆ ಮುಖಾಮುಖಿಯಾದಾಗ ಎನ್ ಕೌಂಟರ್ ನಡೆದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ