ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರುಖ್ ಪುತ್ರ ಆರ್ಯನ್ ಖಾನ್ ಗೆ NCB ಕ್ಲೀನ್ ಚಿಟ್
ಆರೋಪಪಟ್ಟಿಯನ್ನು ಎನ್ ಸಿಬಿ ಕೋರ್ಟ್ ಗೆ ಸಲ್ಲಿಸಿತ್ತು. ಇದರಲ್ಲಿ 14 ಮಂದಿ ಆರೋಪಿಗಳನ್ನು ಹೆಸರಿಸಲಾಗಿತ್ತು.
Team Udayavani, May 27, 2022, 1:37 PM IST
ಮುಂಬಯಿ: ಐಶಾರಾಮಿ ಕ್ರೂಸ್ ಹಡಗಿನಲ್ಲಿನ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಇತರ 5 ಪ್ರಕರಣಗಳ ಕುರಿತು ಎನ್ ಸಿಬಿ ಶುಕ್ರವಾರ (ಮೇ 27) ಕ್ಲೀನ್ ಚಿಟ್ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಮತ್ತೊಂದು ವಿವಾದ: ಅಜ್ಮೀರ್ ದರ್ಗಾ ಹಿಂದೆ ಹಿಂದೂ ದೇವಾಲಯವಾಗಿತ್ತು; ಹಿಂದೂ ಸಂಘಟನೆ
ಐಶಾರಾಮಿ ಕ್ರೂಸ್ ಹಡಗಿನಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಹಾಗೂ ಸ್ನೇಹಿತರಾದ ಅರ್ಬಾಜ್ ಮರ್ಚಂಟ್ ಮತ್ತು ಫ್ಯಾಷನ್ ಡಿಸೈನರ್ ಮುನ್ಮೂನ್ ಧಮೇಚಾ ಡ್ರಗ್ಸ್ ಪಾರ್ಟಿ ಮಾಡಿರುವುದಾಗಿ ಆರೋಪಿಸಿ ಬಂಧಿಸಲಾಗಿತ್ತು.
ಕಳೆದ ವರ್ಷ ಮುಂಬಯಿಯ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ನಿಗ್ರಹ ದಳ ಸುಮಾರು 6,000 ಪುಟಗಳ ಆರೋಪಪಟ್ಟಿಯನ್ನು ಎನ್ ಸಿಬಿ ಕೋರ್ಟ್ ಗೆ ಸಲ್ಲಿಸಿತ್ತು. ಇದರಲ್ಲಿ 14 ಮಂದಿ ಆರೋಪಿಗಳನ್ನು ಹೆಸರಿಸಲಾಗಿತ್ತು.
ಪ್ರಕರಣದಲ್ಲಿ ಆರ್ಯನ್ ಖಾನ್ ಕೆಲವು ದಿನಗಳ ಕಾಲ ಜೈಲಿನಲ್ಲಿದ್ದ. ಆದರೆ ಕೋರ್ಟ್ ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಆರ್ಯನ್ ಖಾನ್ ನನ್ನು ಆರೋಪಿ ಎಂದು ಹೆಸರಿಸಿರಲಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.
ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಆರ್ಯನ್ ಖಾನ್ ಹಾಗೂ ಇತರ ಇಬ್ಬರು ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬಲವಾದ ಸಾಕ್ಷ್ಯಗಳು ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿ, ಮೂವರು ಆರೋಪಿಗಳಿಗೆ ಅ.28ರಂದು ಜಾಮೀನು ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು
ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ
ಉತ್ತರ ನೀಡಲು ಮೂರು ವಾರಗಳ ಅವಕಾಶ: 18 ದಿನಗಳಲ್ಲಿ 8 ಬಾರಿ ಲೋಪ