ಅಸ್ಸಾಂನಲ್ಲಿ ಡಿಎನ್ ಎಲ್ ಎ ಉಗ್ರರ ಗುಂಡಿನ ದಾಳಿಗೆ ಐವರು ಸಾವು
ಗುಂಡಿನ ದಾಳಿಯಲ್ಲಿ ಟ್ರಕ್ ಚಾಲಕರು ಮತ್ತು ಕೆಲಸಗಾರರ ಸಾವು
Team Udayavani, Aug 27, 2021, 10:55 AM IST
ಗುವಾಹಟಿ(ಅಸ್ಸಾಂ): ಹಲವು ಟ್ರಕ್ ಗಳ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಗುರುವಾರ (ಆಗಸ್ಟ್ 26) ರಾತ್ರಿ ನಡೆದಿದ್ದು, ಗುಂಡಿನ ದಾಳಿ ಬಳಿಕ ಟ್ರಕ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಐಸಿಸ್ ಕೆ ದಾಳಿಗೆ ದೇಹಗಳು ಛಿದ್ರ, ಛಿದ್ರ…ಎಲ್ಲೇ ಅಡಗಿದ್ದರೂ ಉಗ್ರರನ್ನು ಬಿಡಲ್ಲ: ಬೈಡೆನ್
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ದಯಾಂಗ್ ಮುಖ್ ಪ್ರದೇಶದಲ್ಲಿ ನಿನ್ನೆ ರಾತ್ರಿ 8.30ರ ಹೊತ್ತಿಗೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಿಮಾಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್ ಎಲ್ ಎ) ಉಗ್ರರು ಗುಂಡಿನ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಟ್ರಕ್ ಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಟ್ರಕ್ ಚಾಲಕರು ಮತ್ತು ಕೆಲಸಗಾರರು ಸಾವನ್ನಪ್ಪಿರುವುದಾಗಿ ದಿಮಾ ಹಸಾವೊ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ಸಿಮೆಂಟ್ ಕಾರ್ಖಾನೆ ಮಾಲೀಕರು ಡಿಎನ್ ಎಲ್ ಎ ಉಗ್ರರ ಹಣದ ಬೇಡಿಕೆಯನ್ನು ತಿರಸ್ಕರಿಸಿದ್ದಕ್ಕೆ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳು ತೆರಳಿದ್ದು, ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ