ಸಿಎಎ ವಿರೋಧಿ ಪ್ರತಿಭಟನೆ: 19 ತಿಂಗಳ ಜೈಲುಶಿಕ್ಷೆ ಬಳಿಕ ಅಸ್ಸಾಂ ಶಾಸಕ ಗೊಗೊಯ್ ಬಿಡುಗಡೆ
ಗೊಗೊಯ್ ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಕೇಂದ್ರ ಕಾರಾಗೃಹಕ್ಕೆ ಆದೇಶವನ್ನು ಕಳುಹಿಸಿತ್ತು
Team Udayavani, Jul 2, 2021, 12:50 PM IST
ಗುವಾಹಟಿ: 2019ರ ಡಿಸೆಂಬರ್ ನಲ್ಲಿ ನಡೆದ ಹಿಂಸಾತ್ಮಕ ಸಿಎಎ ವಿರೋಧಿ ಪ್ರತಿಭಟನೆಯ ಆರೋಪದಲ್ಲಿ ಬಂಧಿಸಲ್ಪಟ್ಟು, ಕಳೆದ 19 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದ ಅಸ್ಸಾಂ ಶಾಸಕ ಅಖಿಲ್ ಗೊಗೊಯ್ ವಿರುದ್ಧದ ಎಲ್ಲಾ ಆರೋಪಗಳಿಂದ ಎನ್ ಐಎ ಕೋರ್ಟ್ ಮುಕ್ತಗೊಳಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ ಪ್ರಕರಣ: ಸ್ಪಷ್ಟನೆ ನೀಡಿದ ವಿಜಯೇಂದ್ರ
ಸಿಎಎ ವಿರೋಧಿ ಪ್ರತಿಭಟನೆಯ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಗೊಗೊಯ್ ಅವರನ್ನು ಯುಎಪಿಎ ಕಾಯ್ದೆಯಡಿ
ಬಂಧಿಸಲಾಗಿತ್ತು. ಶಿವಸಾಗರ್ ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ಗೊಗೊಯ್ ಅವರನ್ನು ಗುವಾಹಟಿ ಆಸ್ಪತ್ರೆಯಿಂದ ಡಿಸ್
ಚಾರ್ಜ್ ಆಗಿರುವುದಾಗಿ ವರದಿ ವಿವರಿಸಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಗೊಗೊಯ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದ
ಎನ್ ಐಎ ವಿಶೇಷ ಕೋರ್ಟ್ ಗೊಗೊಯ್ ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಕೇಂದ್ರ ಕಾರಾಗೃಹಕ್ಕೆ ಆದೇಶವನ್ನು
ಕಳುಹಿಸಿತ್ತು ಎಂದು ವರದಿ ತಿಳಿಸಿದೆ.
ಕೊನೆಗೂ ಸತ್ಯಕ್ಕೆ ಜಯ ದೊರಕಿದೆ. ನನ್ನನ್ನು ಜೈಲಿನೊಳಗೆ ಇರಿಸಬೇಕೆಂಬ ಪ್ರಯತ್ನ ಕೈಗೂಡಲಿಲ್ಲ ಎಂದು ಬಿಡುಗಡೆಗೊಂಡ ನಂತರ ಗೊಗೊಯ್ ಸುದ್ದಿಗಾರರ ಜತೆ ಮಾತನಾಡುತ್ತ, ಇದೊಂದು ಐತಿಹಾಸಿಕ ತೀರ್ಪು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್