ಆಸ್ಟ್ರೇಲಿಯನ್ ಓಪನ್ ಟೆನಿಸ್: ಉಡುಪಿಯ ಚಾರ್ವಿ ಶೆಟ್ಟಿ ಭಾಗಿ
Team Udayavani, Jan 30, 2022, 12:28 PM IST
ಉಡುಪಿ: ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ನೆಲೆಸಿರುವ ಉಡುಪಿ ಮೂಲದ ಚಾರ್ವಿ ಶೆಟ್ಟಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಸಂಘಟನಾ ಸಿಬ್ಬಂದಿ ತಂಡಕ್ಕೆ ಆಯ್ಕೆಯಾಗಿದ್ದು ಬಾಲ್ ಕಿಡ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆಸ್ಟ್ರೇಲಿಯನ್ ಓಪನ್ ಟೆನಿಸ್ ನ ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯಾಟದ ಧ್ವಜವಂದನಾ ತಂಡಕ್ಕೂ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬರ್ನ್ ನ ಹ್ಯಾಲಿ ಬರೀ ಕಾಲೇಜಿನಲ್ಲಿ ಒಂಭತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಚಾರ್ವಿ ಶೆಟ್ಟಿ ಸ್ವತಃ ಟೆನಿಸ್ ಅಟಗಾರ್ತಿ ಮಾತ್ರವಲ್ಲದೆ ಉತ್ತಮ ಈಜುಪಟು, ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಮತ್ತು ಉತ್ತಮ ಚಿತ್ರ ಕಲಾವಿದೆಯೂ ಆಗಿದ್ದಾರೆ.
ಚಾರ್ವಿ ಬಸ್ರೂರು ಕೋಳ್ಕೆರೆ ಅನಂತರಾಮಶೆಟ್ಟಿ ಮತ್ತು ಕೊರಂಗ್ರಪಾಡಿ ದೊಡ್ಡಮನೆ ಬೈಕಾಡಿ ಸುಶ್ಮಿತಾ ಶೆಟ್ಟಿ ದಂಪತಿಗಳ ಪುತ್ರಿ.ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರ ಸಹೋದರಿಯ ಪುತ್ರಿ.
ರಾಜ್ಯಮಟ್ಟದ ಅಂತರ ಶಾಲಾ ಟೆನಿಸ್ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು ಈಜುಗಾರಿಕೆಯಲ್ಲಿ ರಾಜ್ಯ ತಂಡದ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು