ಸಚಿವ ಬೈರತಿ ಬಸವರಾಜುಗೆ ಚಿಕ್ಕಮಗಳೂರು ಉಸ್ತುವಾರಿ ಹೆಚ್ಚುವರಿ ಹೊಣೆ
Team Udayavani, Jul 16, 2022, 12:40 PM IST
ಬೆಂಗಳೂರು: ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದೀಗ ಸರ್ಕಾರ ಬೈರತಿ ಬಸವರಾಜು ಅವರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಿಸಿದೆ. ದಾವಣಗೆರೆ ಜಿಲ್ಲಾ ಉಸಸ್ತುವಾರಿಯೂ ಆಗಿರುವ ಬೈರತಿ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.