ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಸೇವಾ ಶುಲ್ಕ ಹೆಚ್ಚಳವಿಲ್ಲ : ವಿತ್ತ ಸಚಿವಾಲಯದ ಸ್ಪಷ್ಟನೆ
Team Udayavani, Nov 3, 2020, 7:53 PM IST
ನವದೆಹಲಿ: ಯಾವುದೇ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿನ ಸೇವಾ ಶುಲ್ಕ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯ ಸ್ಪಷ್ಪ ಪಡಿಸಿದೆ. ಇದರ ಬೆನ್ನಲ್ಲೇ ಬ್ಯಾಂಕ್ ಆಫ್ ಬರೋಡಾ ನವೆಂಬರ್ 1ರಿಂದ ಜಾರಿಗೆ ತಂದಿದ್ದ ಶುಲ್ಕ ನಿಯಮವನ್ನು ವಾಪಸ್ ಪಡೆದಿದೆ.
ಸದ್ಯ ಇದೊಂದು ಬ್ಯಾಂಕ್ ಮಾತ್ರ ಪ್ರತಿ ತಿಂಗಳು 5 ಉಚಿತ ಹಣ ವಿತ್ಡ್ರಾ ಮತ್ತು ಠೇವಣಿಗೆ ಅವಕಾಶ ನೀಡಿ, ಇದಕ್ಕಿಂತ ಹೆಚ್ಚಿನ ವಹಿವಾಟಿಗೆ ಸೇವಾ ಶುಲ್ಕ ವಿಧಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿತ್ತು. ಇದಕ್ಕೆ ಸಾರ್ವಜನಿಕರ ಕಡೆಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವೂ ಸ್ಪಷ್ಟನೆ ನೀಡಿದ್ದು, ಯಾವುದೇ ಸರ್ಕಾರಿ ಬ್ಯಾಂಕುಗಳಲ್ಲಿ ಸೇವಾ ಶುಲ್ಕ ಹೆಚ್ಚಳದ ಮಾತೇ ಇಲ್ಲ ಎಂದು ಹೇಳಿದೆ.
ಆರ್ಬಿಐನ ನಿಯಮಾವಳಿಗಳ ಪ್ರಕಾರ, ಎಲ್ಲಾ ಬ್ಯಾಂಕುಗಳು ತಮ್ಮ ಸೇವೆಗಳಿಗೆ ನ್ಯಾಯೋಜಿತ, ಪಾರದರ್ಶಕವಾಗಿ ಸೇವಾ ಶುಲ್ಕ ವಿಧಿಸಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು