ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುರುಳಿದ ಮರ, ಇಬ್ಬರು ಗಂಭೀರ, 5೦ಕ್ಕೂ ಹೆಚ್ಚು ವಾಹನಗಳು ಜಖಂ
Team Udayavani, Apr 19, 2022, 6:38 PM IST
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಇಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌದಾಯಿಸಿದ್ದು, ಮರ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನೂ ಓದಿ : ಭಾವೈಕ್ಯತೆ ವಿರೋಧಿ ಸ್ವಾಮೀಜಿ ಹೆಸರಲ್ಲಿ ಭಾವೈಕ್ಯತೆ ದಿನ: ದಿಂಗಾಲೇಶ್ವರಶ್ರೀ ಆಕ್ಷೇಪ
ಕುಲಗೇರಿಯಲ್ಲೂ ಆಲಿಕಲ್ಲು ಸಹಿತ ಗಾಳಿ ಮಳೆ, ತಪ್ಪಿದ ದುರಂತ :
ಬಾಗಲಕೋಟೆ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕುಳಗೇರಿ ಕ್ರಾಸ್ ನಲ್ಲಿ ಎರಡು ಗಂಟೆಗೂ ಹೆಚ್ಚು ಸುರಿದ ಮಳೆ-ಗಾಳಿಯ ರಭಸಕ್ಕೆ ಕಡಿತಗೊಂಡ ವಿದ್ಯುತ್ ಸಂಪರ್ಕ, ಸಿಡಿಲಿನ ಬಡಿತಕ್ಕೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಬಿರುಗಾಳಿ ಮಳೆಗೆ ಮನೆಯ ಮೇಲಿದ್ದ ತಗಡೊಂದು ಹಾರಿ ಬಂದು ರಸ್ತೆಗೆ ಬಿದ್ದಿದ್ದು ಈ ಹೊತ್ತಿನಲ್ಲೇ ಕಾರು ಹಾದು ಹೋಗಿದೆ ಅದೃಷ್ಟವಶಾತ್ ದುರಂತವೊಂದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ