ಭದ್ರಾವತಿ: ಚಾಕುವಿನಿಂದ ಇರಿದು ಯುವಕನ ಹತ್ಯೆ… ಸ್ಥಳದಲ್ಲಿ ಬಿಗುವಿನ ವಾತಾವರಣ
Team Udayavani, Apr 21, 2023, 11:36 PM IST
ಭದ್ರಾವತಿ: ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಸಾಯಿನಗರ ನಿವಾಸಿಯಾದ ವಿನಯ್ ಕುಮಾರ್(25) ಎನ್ನಲಾಗಿದೆ.
ಶುಕ್ರವಾರ ರಾತ್ರಿ 9 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಗಳು ವಿನಯ್ ಕುಮಾರ್’ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಇದರಿಂದ ಗಂಭೀರ ಗಾಯಗೊಂಡಿದ್ದ ವಿನಯ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ತಾಲೂಕು ಸರ್ಕಾರಿ ಆಸ್ಪತೆಗೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೊಸಮನೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಪಿಯುಸಿ ಪರೀಕ್ಷೆ ಸಮಾನ ಅಂಕ ಪಡೆದ ಬೆಳ್ತಂಗಡಿಯ ಅವಳಿ ಸಹೋದರಿಯರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ