ಭಗವಾನ್ ಶ್ರೀರಾಮ ಮತ್ತು ಹಿಂದೂಗಳ ಬಗ್ಗೆ ಯಾಕೆ ದ್ವೇಷ? ಕಾಂಗ್ರೆಸ್ ವಿರುದ್ಧ ಹಾರ್ದಿಕ್
ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ
Team Udayavani, May 24, 2022, 6:15 PM IST
ನವದೆಹಲಿ: ಹಿಂದೂಗಳ ಹಾಗೂ ಭಗವಾನ್ ರಾಮನ ವಿರುದ್ಧ ನಿಮಗೆ ಯಾಕೆ ಇಷ್ಟು ದ್ವೇಷ. ಪ್ರತಿ ಬಾರಿಯೂ ಹಿಂದೂಗಳ ಭಾವನೆಗೆ ಯಾಕೆ ನೋವನ್ನು ಉಂಟು ಮಾಡುತ್ತಿದ್ದೀರಿ? ಇದು ಕಾಂಗ್ರೆಸ್ ಪಕ್ಷವನ್ನು ತೊರೆದ ಯುವ ಮುಖಂಡ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿರುವ ಪರಿ ಇದಾಗಿದೆ.
ಇದನ್ನೂ ಓದಿ:ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್ ಆರ್ಟ್ ಸೇರ್ಪಡೆ
“ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿ ಮೂತ್ರ ವಿಸರ್ಜಿಸಿದ ಫೋಟೊವನ್ನು ಗುಜರಾತ್ ನ ಕಾಂಗ್ರೆಸ್ ಮುಖಂಡರೊಬ್ಬರು ಟ್ವೀಟ್ ಮಾಡಿರುವ ಬಳಿಕ ಹಾರ್ದಿಕ್ ಪಟೇಲ್ ಕಟುವಾಗಿ ಟೀಕಿಸಿರುವುದಾಗಿ ವರದಿಯಾಗಿದೆ.
ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೂ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಅಷ್ಟೇ ಅಲ್ಲ ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹಿಂದೆಯೂ ನಾನು ಹೇಳಿದ್ದೆ. ಇಂದು ಕೂಡಾ ಕಾಂಗ್ರೆಸ್ ಮುಖಂಡರೊಬ್ಬರು ರಾಮಮಂದಿರದ ವಿಚಾರದಲ್ಲಿ ಟ್ವೀಟ್ ಮಾಡಿರುವುದು ಕೂಡಾ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹದ್ದೇ ಆಗಿದೆ ಎಂದು ಪಟೇಲ್ ವಾಗ್ದಾಳಿ ನಡೆಸಿದ್ದಾರೆ.
ನಿಮಗೆ ಭಗವಾನ್ ರಾಮನ ಬಗ್ಗೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಮತ್ತು ಅವರ ಮುಖಂಡರನ್ನು ಕೇಳಲು ಬಯಸುತ್ತೇನೆ. ಹಿಂದೂಗಳ ಬಗ್ಗೆಯೂ ಯಾಕೆ ಇಷ್ಟೊಂದು ದ್ವೇಷ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಭಗವಾನ್ ರಾಮನ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೂ ಕಾಂಗ್ರೆಸ್ ಭಗವಾನ್ ರಾಮನ ವಿರುದ್ಧ ಹೇಳಿಕೆಯನ್ನು ನೀಡುತ್ತಿದೆ ಎಂದು ಪಟೇಲ್ ಕಿಡಿಕಾರಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಮ್ಮನಿಗಾಗಿ 434 ಮೀ. ಉದ್ದ, 5 ಕೆ.ಜಿ. ತೂಕದ ಕ್ಷಮಾಪಣೆ ಪತ್ರ ಬರೆದ ಸಹೋದರಿ !
MUST WATCH
ಹೊಸ ಸೇರ್ಪಡೆ
Social Media Day: ತುಸು ಹೆಚ್ಚು ಅಭಿವ್ಯಕ್ತಿಗೊಳ್ಳುವಂತೆ ಆಹ್ವಾನಿಸುತ್ತಿದೆ ‘ಕೂ’ ಅಭಿಯಾನ!
ಧಾರಾಕಾರ ಮಳೆ; ಬಂಟ್ವಾಳದಲ್ಲಿ ಅಪಾಯದ ಮಟ್ಟ ತಲುಪದ ನೇತ್ರಾವತಿ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ