ಟಿಪ್ಪರ್ ಢಿಕ್ಕಿಯಾಗಿ ಬೈಕ್ ಸವಾರ ಸಾವು : ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ, ಪ್ರತಿಭಟನೆ
Team Udayavani, Jan 8, 2022, 1:40 PM IST
ಗುಂಡ್ಲುಪೇಟೆ: ಕಲ್ಲು ತುಂಬಿದ ಟಿಪ್ಪರ್ ಲಾರಿ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ-766ರ ಹಳ್ಳದ ಮಾದಹಳ್ಳಿ ಗೇಟ್ ಹತ್ತಿರ ಶನಿವಾರ ಬೆಳಗ್ಗೆ ನಡೆದಿದೆ.
ನಂಜನಗೂಡು ತಾಲೂಕಿನ ಮಲ್ಲಹಳ್ಳಿ ಗ್ರಾಮದ ಮುದ್ದರಾಜಪ್ಪ(50) ಮೃತ ವ್ಯಕ್ತಿಯಾಗಿದ್ದು, ಘಟನೆ ನಂತರ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಘಟನೆ ಸಂಭವಿಸಿದ್ದು, ಕೂಡಲೇ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿ ರೈತ ಮುಖಂಡರು ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹೆದ್ದಾರಿ ತಡೆ ಹಿನ್ನಲೆ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿತ್ತು.
ಸ್ಥಳಕ್ಕೆ ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.