ಕಾಂಗ್ರೆಸ್ನ ಪೇ ಸಿಎಂ ಅಭಿಯಾನಕ್ಕೆ ಬಿಜೆಪಿ ಪಕ್ಷ ಹೆದರದು: ವಿಜಯೇಂದ್ರ
Team Udayavani, Sep 24, 2022, 9:07 PM IST
ಬೆಂಗಳೂರು: ಕಾಂಗ್ರೆಸ್ನ “ಪೇ ಸಿಎಂ’ ಅಭಿಯಾನವನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ. ಅದಕ್ಕೆ ನಾವು ಹೆದರಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಶನಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಭ್ರಷ್ಟಾಚಾರದ ಆಡಳಿತ ನೀಡಿರುವ ಕಾಂಗ್ರೆಸ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವಂತಹ ನೈತಿಕತೆಯೇ ಇಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಯುಪಿಎ ಆಡಳಿತ ಅವಧಿಯಲ್ಲಿ ಕಲ್ಲಿದ್ದಲು ಹಗರಣ, 2 ಜಿ ಹಗರಣ, ಕಾಮನ್ವೆಲ್ತ್ ಕ್ರೀಡಾಕೂಟ ಹಗರಣ ಮುಂತಾದವುಗಳಿಂದ ಕೋಟ್ಯಂತರ ರೂ. ಕೊಳ್ಳೆ ಹೊಡೆದಿದ್ದಾರೆ. ಅಂಥವರು ಈಗ ಪೇ ಸಿಎಂ ಅಭಿಯಾನ ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದರು.
ಯತ್ನಾಳ್ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ನಾನು ಫ್ರೆಂಡ್. ಹಾಗಾಗಿ ಆಗಾಗ ವಿಜಯೇಂದ್ರನ ಬಗ್ಗೆ ಮಾತನಾಡುತ್ತಾರೆ ಎಂದು ಚಟಾಕಿ ಹಾರಿಸಿದರು.
ವರಿಷ್ಠರ ತೀರ್ಮಾನದಂತೆ ಸ್ಪರ್ಧೆ
ಬಿಜೆಪಿಯ ವರಿಷ್ಠರು ಯಾವ ಟಾಸ್ಕ್ ನೀಡುತ್ತಾರೋ ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಸಿದ್ಧನಿದ್ದೇನೆ. ಈಗಾಗಲೇ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ.
– ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಂತ್ರ ಪಠಣ
ಮೊಬೈಲ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ:ಏನಿದು ಸ್ಮಾರ್ಟ್ ಫೋನ್ ವಿಷನ್ ಸಿಂಡ್ರೋಮ್
ಕ್ಯಾಂಪ್ಕೋ ಲಿಮಿಟೆಡ್; ರೈತರ, ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಪಾಡುವ ಸಹಕಾರಿ ಸಂಸ್ಥೆ…
ಶಿವಾಜಿ, ಬಸವೇಶ್ವರ, ಬುದ್ಧ, ಗಾಂಧೀಜಿಯನ್ನೇ ಬಿಡದವರು ನನ್ನನ್ನು ಬಿಡುತ್ತಾರಾ: ಕುಮಾರಸ್ವಾಮಿ
ಪ್ರಕಾಶ್ ರಾಜ್ ಹೇಳಿಕೆಗೆ ʻದಿ ಕಾಶ್ಮೀರ್ ಫೈಲ್ಸ್ʼ ನಿರ್ದೇಶಕ ಕಿಡಿ