ವಿಧಾನಸಭಾ ಚುನಾವಣೆ: ಬಿಜೆಪಿ ಪ್ರಭಾರಿಯಾಗಿ ಪ್ರಧಾನ್, ಸಹ ಪ್ರಭಾರಿ ಅಣ್ಣಾಮಲೈ
ಯುಪಿಯ ಭರ್ಜರಿ ಗೆಲುವು, ಬ್ಯಾನರ್ಜಿಗೆ ಸೋಲಿನ ಶಾಕ್ ನೀಡಿದ್ದ ಪ್ರಧಾನ್
Team Udayavani, Feb 4, 2023, 2:25 PM IST
ಬೆಂಗಳೂರು : 2023 ರಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಭಾರಿ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣಾ ಪ್ರಭಾರಿ ಮತ್ತು ಸಹ ಪ್ರಭಾರಿಗಳಾಗಿ ಪ್ರಬಲ ನಾಯಕರನ್ನು ನೇಮಕ ಮಾಡಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಿದ್ದು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಮತ್ತು ಕರ್ನಾಟಕದಲ್ಲಿ ಚಿರಪರಿಚಿತ ಮುಖ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದಾರೆ.
ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಬಿಜೆಪಿಯು ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಧಾನ್, ಈ ಹಿಂದೆ ಬಿಹಾರದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ, ಕರ್ನಾಟಕ ಮತ್ತು ಉತ್ತರಾಖಂಡದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿದ್ದರು. ಅವರು ಪಶ್ಚಿಮ ಬಂಗಾಳದ ನಂದಿಗ್ರಾಮ್‌ಗೆ ಚುನಾವಣಾ ಉಸ್ತುವಾರಿಯಾಗಿದ್ದರು, ಅಲ್ಲಿ ಟಿಎಂಸಿ ನಾಯಕಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವನ್ನು ರಾಜ್ಯ ಅಸೆಂಬ್ಲಿಯಲ್ಲಿ ಭಾರಿ ಗೆಲುವಿನತ್ತ ಮುನ್ನಡೆಸಿದರೂ ಸೋತಿದ್ದರು.
ಈಗಾಗಲೇ ಅಣ್ಣಾಮಲೈ ಒಂದು ಸುತ್ತಿನ ಭರ್ಜರಿ ಪ್ರಚಾರ ನಡೆಸಿದ್ದು, ಅವರ ಸಭೆಗಳಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನ ಕೆಲ ಕ್ಷೇತ್ರಗಳಲ್ಲಿ ತಮಿಳು ಭಾಷಿಕ ಮತದಾರರೂ ನಿರ್ಣಾಯಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಯ ಕ್ಷೇತ್ರದಲ್ಲಿ ಕೃಷ್ಣಪ್ಪ ಅವರಿಗೆ ʼಕೈʼ ಟಿಕೆಟ್ ನೀಡಿದಕ್ಕೆ ಕಾರ್ಯಕರ್ತರ ವಿರೋಧ
ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ
ಡೈಲಿಡೋಸ್:ಅಗ್ನಿ ಪರೀಕ್ಷೆ ಕಾಲ ಮುಗೀತು ಇನ್ನು ಹೊಸ ಪರೀಕ್ಷೆ-ಕುದುರೆಯೂ ಇಲ್ಲ,ಅಗ್ನಿಯೂ ಇಲ್ಲ
ವಿಧಾನ-ಕದನ 2023: ಚುರುಕುಗೊಂಡ ತಪಾಸಣೆ-ಹೆಚ್ಚಿದ ಪೊಲೀಸರ ನಿಗಾ
ಹೀಗೂ ಉಂಟು: ಅಮ್ಮ, ಮಗ ಸಚಿವರಾಗಿದ್ದರು !