ಇಂದಿನಿಂದ ಬಿಜೆಪಿ ರೈತ ಮೋರ್ಚಾ ಸಮಾವೇಶ
Team Udayavani, Jan 29, 2023, 6:45 AM IST
ಬೆಂಗಳೂರು: ಬೆಳಗಾವಿಯಲ್ಲಿ ರವಿವಾರ ಮತ್ತು ಸೋಮವಾರ (ಜ. 29 ಮತ್ತು 30) ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.
ರವಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದು, ರಾಷ್ಟ್ರೀಯ ರೈತ ಮೋರ್ಚಾದ ಅಧ್ಯಕ್ಷ ರಾಜಕುಮಾರ ಚಹರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲಾ ಅಂಗಡಿ, ಶಾಸಕರಾದ ಅನಿಲ್ ಬೆನಕೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಪಾಲ್ಗೊಳ್ಳುವರು. ಅಲ್ಲದೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
30ರಂದು ಸೋಮವಾರ ಮಧ್ಯಾಹ್ನ 12.30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ನಡೆಯಲಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ . ಸಂತೋಷ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯ ಅತಿಥಿಗಳಾಗಿರುವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ