ಸವದತ್ತಿ ಯಲ್ಲಮ್ಮನೂ ಸಿದ್ದರಾಮಯ್ಯರನ್ನು ಕಾಪಾಡಲಾರಳು: ಬಿಜೆಪಿ ವ್ಯಂಗ್ಯ


Team Udayavani, Jul 2, 2022, 1:03 PM IST

bjp slams siddaramaiah

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನು ಹತ್ತು ತಿಂಗಳು ಬಾಕಿಯಿದೆ. ಈಗಾಗಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದಿರುವ ರಾಜ್ಯ ಕಾಂಗ್ರೆಸ್ ಮುಖಂಡರು ವಿಧಾನಸಭಾ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಬೆಳಗಾವಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಈ ಹಿನ್ನೆಲೆ ಬಿಜೆಪಿಯು ಸಿದ್ದರಾಮೋತ್ಸವ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಅವರಿಂದಲೇ ಪಕ್ಷ ತೊರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಸರಣಿ ಕೂ ಮಾಡಿರುವ ಬಿಜೆಪಿಯು, ಹಿಂದೂ ವಿರೋಧಿ ಧೋರಣೆಯಿಂದಲೇ ಸಿದ್ದರಾಮಯ್ಯ ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ. ಬದಾಮಿಯಲ್ಲೂ ಬನಶಂಕರಿಯ ಶಾಪ, ಸವದತ್ತಿ ಯಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು, ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಹೇಳಿದೆ.

ಇದನ್ನೂ ಓದಿ:ಮಗನಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ವೈದ್ಯನಿಂದ ಹಣ ಪಡೆದು ನಕಲಿ ಹನಿಟ್ರ್ಯಾಪ್‌: ಬಂಧನ

ಆ ಧರ್ಮರಾಯನ ಹಿಂದೆಯೇ ಯಾರೂ ಬರಲಿಲ್ಲ, ನಿಮ್ಮಂತಹ ಅಧರ್ಮರಾಯನ ಹಿಂದೆ ಯಾರು ತಾನೇ ನಿಲ್ಲಬಲ್ಲರು ಸಿದ್ದರಾಮಯ್ಯ? ನಿಮ್ಮ ಉತ್ಸವ ನಾಲ್ಕು ಕುರ್ಚಿಗಳನ್ನು ತುಂಬಬಹುದೇ ಹೊರತು, ನಾಲ್ಕು ಸೀಟುಗಳನ್ನು ಗಳಿಸಿ ಕೊಡದು. ಸಿದ್ದರಾಮಯ್ಯನವರೇ, ಮೂಲ ಕಾಂಗ್ರೆಸ್ಸಿಗರು ನಿಮ್ಮಿಂದಾಗಿಯೇ ಪಕ್ಷ ತೊರೆಯುತ್ತಿರುವುದು ನಿಜವಲ್ಲವೇ ಎಂದು ಪ್ರಶ್ನಿಸಿದೆ.

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ನಾಂದಿ ಹಾಡುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯ ಅವರಿಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ ಎಂದು ವ್ಯಂಗ್ಯವಾಡಿದೆ.

ಆ ಭಾಗ್ಯ, ಈ ಭಾಗ್ಯ ಎಂದು ಘೋಷಣೆ ಮಾಡಿದ್ದೇ ಬಂತು, ಜನಪ್ರಿಯತೆ, ಪ್ರಚಾರಕ್ಕಾಗಿ ಮಾಡಿದ ಯಾವ ಕಾರ್ಯವೂ ಈಗ ಸಿದ್ದರಾಮಯ್ಯ ಸಹಾಯಕ್ಕೆ ಬರುತ್ತಿಲ್ಲ. ಹಲವು ಬಿಟ್ಟಿ ಭಾಗ್ಯ ನೀಡಿದ ಸಿದ್ದರಾಮಯ್ಯಗೆ ಈಗ ಕ್ಷೇತ್ರ ಭಾಗ್ಯದ ಫಲಾನುಭವಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಿಂತ ನಾಚಿಗಗೇಡಿನ ಸಂಗತಿ ಮತ್ತೊಂದಿದೆಯೇ? ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರ ಕುಮಾರನ ಪೌರುಷ ಅಷ್ಟೇ. ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ? ಎಂದು ಕೇಳಿದೆ.

ತಳಹದಿಯಿಲ್ಲದೆ ಮಹಡಿ ಮನೆ ಕಟ್ಟಲು ಸಿದ್ದರಾಮಯ್ಯ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರಿಗೆ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗಲಾರದ ಪರಿಸ್ಥಿತಿ ಯಾವ ನಾಯಕರಿಗೂ ಬರಬಾರದು. ಸಿದ್ದರಾಮಯ್ಯನವರೇ, ಇದಕ್ಕಾಗಿ ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ ಎಂದು ರಾಜ್ಯ ಬಿಜೆಪಿ ಕುಹಕವಾಗಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.