ಇಂದು ಜನಸ್ಪಂದನ ಸಮಾವೇಶ; ಹೊಸ ಯೋಜನೆ ಪ್ರಕಟನೆ ನಿರೀಕ್ಷೆ ; 3 ಲಕ್ಷ ಜನ ಸೇರುವ ಸಾಧ್ಯತೆ

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ 3 ವರ್ಷಗಳ ಸಾಧನೆಯ ಅನಾವರಣ

Team Udayavani, Sep 10, 2022, 6:40 AM IST

ಇಂದು ಜನಸ್ಪಂದನ ಸಮಾವೇಶ; ಹೊಸ ಯೋಜನೆ ಪ್ರಕಟನೆ ನಿರೀಕ್ಷೆ ; 3 ಲಕ್ಷ ಜನ ಸೇರುವ ಸಾಧ್ಯತೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಶನಿವಾರ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೃಹತ್‌ ಸಮಾವೇಶಕ್ಕೆ ಸಜ್ಜಾಗಿರುವ ದೊಡ್ಡಬಳ್ಳಾಪುರದಲ್ಲಿ ಕಣ್ಣು ಹಾಯಿಸಿದಲ್ಲೆಲ್ಲಾ ಬಿಜೆಪಿ ನಾಯಕರ ಫೋಟೋಗಳು, ಕಟೌಟ್‌ಗಳು, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಿಸುವುದು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಈ ಸಮಾವೇಶದ ಉದ್ದೇಶವಾಗಿದೆ.

ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವೆ ಸ್ಮತಿ ಇರಾನಿ ಹಾಗೂ ರಾಜ್ಯ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ವಿಶೇಷವಾಗಿ ಬಯಲು ಸೀಮೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಜಿಲ್ಲೆಗಳ ಜನರನ್ನು ಸೇರಿಸಲು ಬಿಜೆಪಿ ಯೋಜಿಸಿದ್ದು, ಸುಮಾರು 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನರನ್ನು ಕರೆ ತರಲು 5 ಸಾವಿರ ಬಸ್‌ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಸಮಾವೇಶವು ನಿರ್ವಿಘ್ನವಾಗಿ ನಡೆಯಲಿ ಎಂಬ ಉದ್ದೇಶದಿಂದ ಶುಕ್ರವಾರ ಬೆಳಗ್ಗೆ ವೇದಿಕೆ ಸ್ಥಳದಲ್ಲಿ ಗಣಪತಿ ಹೋಮ ಮಾಡಲಾಗಿದೆ.

ಯೋಜನೆ ಘೋಷಣೆ ನಿರೀಕ್ಷೆ:
ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಷ್ಟು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ. ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲು ತೀರ್ಮಾಸಿದೆ ಎಂದು ಹೇಳಲಾಗಿದೆ. ಜನಸ್ಪಂದನ ಸಮಾವೇಶದ ಮೂಲಕ ಬಿಜೆಪಿ ನಾಯಕರು ಸಂದೇಶ ರವಾನೆ ಮಾಡಲು ನಿರ್ಧರಿಸಿದ್ದಾರೆ.

ಸಚಿವರ ಉಸ್ತುವಾರಿ:
ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್‌, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್‌ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ.

ಬಿಜೆಪಿ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜನರಿಂದ ಜನರಿಗಾಗಿಯೇ ಜನಸ್ಪಂದನೆ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ಜನತೆಗೆ ನೀಡಿರುವ ವಿವಿಧ ಯೋಜನೆಗಳ ಫ‌ಲಾನುಭವಿಗಳಿಗಾಗಿಯೇ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜನರೇ ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಜನರಿಗಾಗಿಯೇ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದರಿಂದ ಜನಸ್ಪಂದನೆ ಸಮಾವೇಶವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

3 ಲಕ್ಷ- ಜನರಿಗೆ ಭೋಜನ ಮತ್ತು ಆಸನ ವ್ಯವಸ್ಥೆ
200 ಎಕರೆ- ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ
5 ಸಾವಿರ – ಬಸ್‌ಗಳ ವ್ಯವಸ್ಥೆ
40 ಎಕರೆ- ಪ್ರದೇಶದಲ್ಲಿ ಪೆಂಡಾಲ್‌

ಅಭಿವೃದ್ಧಿ ಪರ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜನತೆಯ ನಡುವಿನ ಸ್ಪಂದನೆಯ ಸೇತುವೆಯೇ “ಜನಸ್ಪಂದನ ಸಮಾವೇಶ’. ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಲಕ್ಷಾಂತರ ಮಂದಿ ಅತ್ಯುತ್ಸಾಹದಿಂದ ಆಗಮಿಸಲಿದ್ದಾರೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.