ಧರ್ಮದ್ರೋಹಿ ಬಿಜೆಪಿಯಿಂದ ಹಿಜಾಬ್,ಹಲಾಲ್ ನಿಷೇಧದ ಭಜನೆ: ದಿನೇಶ್ ಗುಂಡೂರಾವ್

ಕೇಂದ್ರದಿಂದ ಜಿಎಸ್ ಟಿ ಪಾಲು ಕೇಳಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲ

Team Udayavani, Mar 30, 2022, 11:56 AM IST

dinesh-gu

ಬೆಂಗಳೂರು : ರಾಜ್ಯದ ಅಭಿವೃದ್ಧಿಯನ್ನು ಕಾಲ ಕಸ‌ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಿಜಾಬ್,ಹಲಾಲ್,ವ್ಯಾಪಾರ ನಿಷೇಧದ ಭಜನೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಸಾಧನೆಯ ಆಧಾರದಲ್ಲಿ ಜನರ ಮುಂದೆ ಹೋಗಲು ಈ ಸರ್ಕಾರಕ್ಕೆ ಮುಖವಿಲ್ಲ. ಹಾಗಾಗಿ ಮುಗ್ದ ಜನರಿಗೆ ಧರ್ಮದ ಕಣ್ಕಾಪು ಕಟ್ಟಿ ಮೂರ್ಖರನ್ನಾಗಿಸುತ್ತಿದೆ. ಧರ್ಮದ ಅಮಲು ತಲೆಗೇರಿಸಿಕೊಂಡಿರುವ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವೇ?’ ಎಂದು ಪ್ರಶ್ನಿಸಿದ್ದಾರೆ.

‘ಈ ಸರ್ಕಾರದಲ್ಲಿ 40% ಕಮಿಷನ್ ದಂಧೆ ನಿರಂತರವಾಗಿ ನಡೆಯುತ್ತಿದೆ. ಸಚಿವ ಈಶ್ವರಪ್ಪ ಕಮೀಷನ್ ಕೇಳಿದ ಬಗ್ಗೆ ಗುತ್ತಿಗೆದಾರರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಆದರೂ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಿಲ್ಲ. ಸಂಪುಟದಲ್ಲಿ ಲಂಚಕೋರರ ಗುಂಪೇ ಇದೆ. ಕಮಿಷನ್ ದಂಧೆಯ ವಿಚಾರ ಮರೆಮಾಚಲು ಈ ಸರ್ಕಾರ ಧರ್ಮದ ಅಸ್ತ್ರ ಬಳಸಿ ನಾಟಕವಾಡುತ್ತಿದೆ’ ಎಂದು ಬರೆದಿದ್ದಾರೆ.

‘ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಜಿಎಸ್ ಟಿ ಪಾಲು ಸಿಕ್ಕಿಲ್ಲ. ಇತ್ತ ರಾಜ್ಯ 15 ಸಾವಿರ ಕೋಟಿ ರಾಜಸ್ವ ಕೊರತೆಯಲ್ಲಿದೆ. ಈ ಸರ್ಕಾರಕ್ಕೆ ಈ ವಿಚಾರಗಳು ಅಪ್ರಸ್ತುತವಾಗಿರುವುದು ದುರಂತ. ಕೇಂದ್ರದಿಂದ ಜಿಎಸ್ ಟಿ ಪಾಲು ಕೇಳಲು ರಾಜ್ಯ ಬಿಜೆಪಿ ನಾಯಕರಿಗೆ ಧಮ್ ಇಲ್ಲ. ಆದರೆ ಸದಾಕಾಲ ಧರ್ಮ ದೇವರು ಎಂದೇಳಿಕೊಂಡು ಕಲಹ ಸೃಷ್ಟಿಸಿ ರಾಜಕಾರಣ ಮಾಡುತ್ತಿದೆ’ ಎಂದು ಆಕ್ರೋಶ ಹಾಕಿದ್ದಾರೆ.

‘ಭಗವದ್ಗೀತೆ,ಬೈಬಲ್,ಕುರಾನ್ ಸೇರಿದಂತೆ ಎಲ್ಲಾ ಗ್ರಂಥಗಳ ಸಾರವೇ ಶಾಂತಿ ಮತ್ತು ಪ್ರೀತಿ. ಯಾವ ಧರ್ಮವೂ ಮನುಷ್ಯ ದ್ವೇಷದ ಬೋಧನೆ ಮಾಡಿಲ್ಲ. ಗ್ರಂಥಗಳ ಸಾರ ಗೊತ್ತಿಲ್ಲದ ಬಿಜೆಪಿಯವರು ಜನರ ಮನಸ್ಸಿನಲ್ಲಿ ಧರ್ಮದ ವಿಷಬೀಜ ಬಿತ್ತುತ್ತಿದ್ದಾರೆ. ಭಗವದ್ಗೀತೆಯ ತತ್ವಕ್ಕೆ ವಿರುದ್ಧವಾಗಿ ಮನುಷ್ಯ ದ್ವೇಷ ಪಸರಿಸುತ್ತಿರುವ ಬಿಜೆಪಿಯವರು ನಿಜವಾದ ಧರ್ಮದ್ರೋಹಿಗಳು’ ಎಂದು ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

accident 2

ಉದ್ಯಾವರ : ಅಪರಿಚಿತ ವಾಹನ ಢಿಕ್ಕಿ : ವ್ಯಕ್ತಿ ಗಂಭೀರ

accuident

ಹಾಲ್ಕಲ್‌ ಬಳಿ ಬಸ್‌ ಮಗುಚಿ ಬಿದ್ದು, ಓರ್ವ ಪ್ರಯಾಣಿಕ ಸಾವು, ಐದು ಮಂದಿಗೆ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು

ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು

ರಾಜ್ಯದಲ್ಲಿ ಮತ ನಿರ್ಲಕ್ಷ್ಯ ಹೆಚ್ಚು: ಚುನಾವಣ ಆಯುಕ್ತ ರಾಜೀವ್‌ ಕುಮಾರ್‌

ರಾಜ್ಯದಲ್ಲಿ ಮತ ನಿರ್ಲಕ್ಷ್ಯ ಹೆಚ್ಚು: ಚುನಾವಣ ಆಯುಕ್ತ ರಾಜೀವ್‌ ಕುಮಾರ್‌

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಬಿಜೆಪಿಯಿಂದ ಮೀಸಲಾತಿ ವೈಜ್ಞಾನಿಕ ಹಂಚಿಕೆ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

ಭಾಷಾ ದ್ವೇಷ ತಡೆಯುವುದು ಅಗತ್ಯ: ವೈದೇಹಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ