ನಾಲಗೆಯ ಮೇಲೆ ನಿಯಂತ್ರಣವಿರಬೇಕು’: ಮಹುವಾ ಮೊಯಿತ್ರಾಗೆ ಹೇಮಾ ಮಾಲಿನಿ
ಲೋಕಸಭೆಯಲ್ಲಿ ಟಿಎಂಸಿ ಸಂಸದೆ ಹೇಳಿಕೆ ವಿವಾದ
Team Udayavani, Feb 8, 2023, 2:40 PM IST
ನವದೆಹಲಿ: ಲೋಕಸಭೆಯಲ್ಲಿ ಮಂಗಳವಾರ (ಫೆ 7) ಬಜೆಟ್ ಅಧಿವೇಶನದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಆಕ್ಷೇಪಾರ್ಹ ಪದ ಬಳಕೆಯಿಂದಾಗಿ ತೀವ್ರ ಆಕ್ರೋಶ ಎದುರಿಸಿಸಿದ್ದು ವೀಡಿಯೋವೊಂದರಲ್ಲಿ, ಮೊಯಿತ್ರಾ ಅವರು ತಮ್ಮ ಭಾಷಣದ ವೇಳೆ ಬಿಜೆಪಿ ಸಂಸದ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಆಕ್ಷೇಪಾರ್ಹ ಪದವನ್ನು ಹೇಳುತ್ತಿರುವುದು ಕೇಳಿಬಂದಿದೆ.
ಆಕೆಯ ವರ್ತನೆಯನ್ನು ಟೀಕಿಸಿದ ಹಲವು ಬಿಜೆಪಿ ಸಂಸದರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಜೊತೆಗೆ, ಬಿಜೆಪಿ ಸಂಸದೆ ಮತ್ತು ನಟಿ ಹೇಮಾ ಮಾಲಿನಿ ಕೂಡ ಮೊಯಿತ್ರಾ ಅವರ ಅಸಭ್ಯ ಭಾಷೆಯ ಬಳಕೆಗಾಗಿ ವಾಗ್ದಾಳಿ ನಡೆಸಿದ್ದು, ನಾಲಗೆಯ ಮೇಲೆ ನಿಯಂತ್ರಣವಿರಬೇಕು ಎಂದು ಕಿಡಿ ಕಾರಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಬುಧವಾರ ಸಂಸತ್ತಿನಲ್ಲಿ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ನೀಡಿದ ಹೇಳಿಕೆಗಾಗಿ ಕ್ಷಮೆಯಾಚಿಸುವಂತೆ ಮತ್ತು ಅವರ ವಿರುದ್ಧ ಕ್ರಮಕ್ಕಾಗಿ ಕರೆಗಳ ನಡುವೆಯೇ ನಾನು ನನ್ನ ಹೇಳಿಕೆಗಳಿಗೆ ಬದ್ದವಾಗಿದ್ದೇನೆ ಎಂದಿದ್ದಾರೆ.
ಅವರ ಹೇಳಿಕೆಗಳ ನಂತರ ವಿವಾದ ಭುಗಿಲೆದ್ದ ಒಂದು ದಿನದ ನಂತರ “ನಾನು ಆ್ಯಪಲ್,ಆ್ಯಪಲ್ ಎಂದು ಕರೆದಿದ್ದೇನೆ ಮತ್ತು ನಾನು ಅದಕ್ಕೆ ಬದ್ಧಳಾಗಿದ್ದೇನೆ” ಎಂದು ಅವರು ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ಮಹುವಾ ಮೊಯಿತ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ
ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕ
ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ
ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ
MUST WATCH
ಹೊಸ ಸೇರ್ಪಡೆ
ಜಮೀನು,ಚಿನ್ನ,ಟ್ರ್ಯಾಕ್ಟರ್, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು
ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್
ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ
ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!